ಮಕ್ಕಳಿಗೆ ಕನ್ನಡ ಗೀತೆ ಗಾಯನ ಸ್ಪರ್ಧೆ ಉತ್ತಮ ವೇದಿಕೆ: ಭಾರತಿ ಆರ್.ಬಣಕಾರ್

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.24:
“ಮಕ್ಕಳಲ್ಲಿ ಕನ್ನಡ ನಾಡು ನುಡಿ ಭಾಷಾಭಿಮಾನ ಮೂಡಿಸುವ ನಿಟ್ಟಿನಲ್ಲಿ ಮಕ್ಕಳಿಗೆ ಕನ್ನಡ ಗೀತೆ ಗಾಯನ ಸ್ಪರ್ಧೆ ಉತ್ತಮ ವೇದಿಕೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರ್ಯದರ್ಶಿಗಳಾದ ಭಾರತಿ ಆರ್ ಬಣಕಾರ್ ಹೇಳಿದರು.
ನಗರದ ಜಿಲ್ಲಾ ಬಾಲಭವನದ ಸಭಾಂಗಣದಲ್ಲಿ ಸೋಮವಾರ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಪಂಚಾಯುತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 5 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ಕನ್ನಡ ರಾಜ್ಯೋತ್ಸವದ  ಅಂಗವಾಗಿ ಕನ್ನಡ ಗೀತೆ  ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ನಾಡಿನ ಸಾಹಿತಿ, ಕವಿಗಳ ಕೃತಿಗಳನ್ನು ಮಕ್ಕಳಿಗೆ ಬಿಡುವಿನ ಸಮಯದಲ್ಲಿ ಅವಲೋಕನ ಮಾಡಲು ಪೋಷಕರು ಪ್ರೋತ್ಸಾಹ ನೀಡಬೇಕು. ಆದಿ ಕವಿ ಪಂಪ, ರನ್ನ, ಪೊನ್ನ ತ್ರಿವಳಿ ರತ್ನಗಳ ಸಾಹಿತ್ಯ ಭಂಡಾರ ವಿಶ್ವಕ್ಕೆ ಮಾದರಿಯಾಗಿದೆ. ಮಕ್ಕಳ ಕ್ಷೇತ್ರದಲ್ಲಿ ಜಿ ಪಿ ರಾಜ ರತ್ನಂರವರ ರತ್ನನ್ ಪದಗಳನ್ನು ವಾಚನ ಮಾಡುವುದರಿಂದ ಭಾಷಾ ಸ್ಪಷ್ಟತೆ ಮೂಡುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವುದರಿಂದ ಗುರಿ ಮುಟ್ಟಲು ಸ್ಪರ್ಧಾತ್ಮಕ ಮನೋಭಾವನೆ ಮೂಡುತ್ತದೆ. ಈ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.
ಜಿಲ್ಲಾ ನಿರೂಪಣಾಧಿಕಾರಿ ಕೆಂಪಹನುಮಯ್ಯ ಮಾತನಾಡಿ, ಮಕ್ಕಳಿಗೆ ಭಾಷಾ ಹಿಡಿತ ಸೃಜನಾತ್ಮಕ ಚಟುವಟಿಕೆಗಳಿಗೆ ವೇದಿಕೆ ಪೂರಕವಾಗುತ್ತದೆ ಎಂದರು.
ಕಾರ್ಯಕ್ರಮದ ಸ್ಪರ್ಧೆಗಳ ನಂತರ ಶ್ರೀ ಸಿರಿ ಸಂಪಿಗೆ ಸಂಸ್ಥೆಯ ವತಿಯಿಂದ ಕನ್ನಡ ಗೀತೆಗಳಿಗೆ ನರ್ತನದ ಮೂಲಕ ಸಾಂಸ್ಕøತಿಕ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರವನ್ನು ಹಾಗೂ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರಗಳನ್ನು ನೀಡಲಾಯಿತು. ಮನೋಜ್ ಇವರಿಂದ ಕರ್ನಾಟಕ ರತ್ನ ಪುನಿತ್ ರಾಜ್ ಕುಮಾರ್‍ರವರ ಗೀತೆ ಹಾಡುವಾಗ ಅವರ ಭಾವಚಿತ್ರವನ್ನು ಚಿತ್ರಿಸಿ ಮೆಚ್ಚುಗೆಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಎಂ ಕೆ. ಹರೀಶ್ ಮತ್ತು ಶ್ರೀನಿಧಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಪವಿತ್ರ, ಶ್ರೀಮತಿ ಸವಿತಾ, ಜಿಲ್ಲಾ ಬಾಲಭವನದ ವ್ಯವಸ್ಥಾಪಕ ಡಿ.ಹೆಚ್.ರಜಾಕ್ ಸಾಬ್, ಅದೀಕ್ಷಕ ಮಾರುತಿ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕರಾದ ಡಿ.ಶ್ರೀಕುಮಾರ, ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು. ರಂಗಸ್ವಾಮಿ.ಎನ್ ವಂದಿಸಿದರು.
[t4b-ticker]

You May Also Like

More From Author

+ There are no comments

Add yours