ಏಳು ಸುತ್ತಿನ ಕೋಟೆಯಲ್ಲಿ ಮೊಳಗಿದ ಕನ್ನಡದ ಕಹಳೆ ಕನ್ನಡ ಪರಂಪರೆ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ: -ಜಿಲ್ಲಾಧಿಕಾರಿ ದಿವ್ಯಾ ಪ್ರಭು

 

 

 

 

ಕರ್ನಾಟಕ ವಾರ್ತೆ (ಚಿತ್ರದುರ್ಗ).ಅ.28:
ಕನ್ನಡ ನಾಡಿನ ಪರಂಪರೆಯನ್ನು ಕಾಪಾಡಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಹೇಳಿದರು.
67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರ ಸಭೆ ಸಂಯುಕ್ತ ಆಶ್ರಯದಲ್ಲಿ ‘ನನ್ನ ನಾಡು ನನ್ನ ಹಾಡು’ ಘೋಷವಾಕ್ಯದೊಂದಿಗೆ ನಗರದ ಕೋಟೆ ಆವರಣದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ರಾಷ್ಟ್ರ ಹಾಗೂ ವಿದೇಶಗಳಲ್ಲಿ ಕೂಡ ಆಯೋಜಿಸಲಾಗಿದೆ. ವಿಶ್ವದ ಮೂಲೆ ಮೂಲೆಯಿಂದ ಕನ್ನಡಿಗರು ಆನ್ ಲೈನ್ ಮೂಲಕ ಕೋಟಿ ಕಂಠ ಗಾಯನದಲ್ಲಿ ಭಾಗವಹಿಸಿದ್ದಾರೆ. ಐತಿಹಾಸಿಕ ಕಾರ್ಯಕ್ರಮಕ್ಕೆ ಇಡೀ ವಿಶ್ವ ಸಾಕ್ಷಿಯಾಗಿದೆ. ಕನ್ನಡಿಗರ ನಾಡು ನುಡಿಯ ಮೇಲಿನ ಪ್ರೇಮ ಗೀತೆಗಳ ಮೂಲಕ ಹೊರಹೊಮ್ಮಿದೆ. ಕನ್ನಡ ಗೀತೆಗಳ  ಪಾಂಚಜನ್ಯದಲ್ಲಿ ಚಿತ್ರದುರ್ಗದ ಜನರ ಧ್ವನಿಯ ಸೇರಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಸಂಕಲ್ಪ ವಿಧಿ ಭೋಧಿಸಿದರು. ಕಲಾವಿದ ಮೊರಾರ್ಜಿ ನೇತೃತ್ವದ ತಂಡ ಗೀತ ಗಾಯನದ ಕಾರ್ಯಕ್ರಮ ನೆಡೆಸಿಕೊಟ್ಟರು. ಜಿ.ಪಂ ಸಿಇಓ ಎಂ.ಎಸ್.ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್, ಜಿ.ಪಂ. ಉಪಕಾರ್ಯದರ್ಶಿ ಡಾ.ರಂಗಸ್ವಾಮಿ ಸೇರಿದಂತೆ ಇತರೆ ಅಧಿಕಾರಿಗಳು, ಕನ್ನಡ ಸಂಘ ಸಂಸ್ಥೆ ಸದಸ್ಯರು ಹಾಗೂ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಕನ್ನಡ ಪುರಾತನ ಭಾಷೆಯಾಗಿದ್ದು, ನಮ್ಮ ನಾಡು-ನುಡಿ ಹಾಗೂ ತಾಯಿನೆಲ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಸಂಕಲ್ಪವಿಧಿ ಬೋಧಿಸಿದರು. ಗಂಗಾಧರ್ ಮತ್ತು ತಂಡ ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿನಿರ್ದೇಶಕ ಮಧುಸೂದನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಂಜುನಾಥ್, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಸೇರಿದಂತೆ ಮತ್ತಿತರರು ಇದ್ದರು.
=======
[t4b-ticker]

You May Also Like

More From Author

+ There are no comments

Add yours