ವೇಣೂರು: ದ.ಕ.ಜಿ.ಪಂ., ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇವರ ಸಂಯುಕ್ತ ಆಶ್ರಯದಲ್ಲಿ ಸೆ. 2ರಂದು ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ದ.ಕ. ಜಿಲ್ಲಾಮಟ್ಟದ ಆಟೋಟ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕಿನ ಬಜಿರೆ ಪಿಯಂಶ್ರೀ ಕೆಪಿಎಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಕು. ಮಿತ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಕು. ಮಿತಗೆ ಮನೋಹರ್ ಅವರು ತರಬೇತಿ ನೀಡಿರುತ್ತಾರೆ. ವಿಜೇತೆ ವಿದ್ಯಾರ್ಥಿನಿಯನ್ನು ಶಾಲಾ ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕ ವೃಂದ, ಎಸ್ಡಿಎಂಸಿ ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಅಭಿನಂದಿಸಿದರು.





