ಉಡುಪಿ ಜ, 23: ಖಾಸಗಿ ಬಸ್ ಮತ್ತು ಕ್ರೂಸರ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟರೆ, 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದಿದೆ.
ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ರಭಸಕ್ಕೆ ಕ್ರೂಸರ್ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






