ಕರ್ನಾಟಕ ಗೃಹ ಕಾರ್ಮಿಕರ ದಿನಾಚರಣೆ ಇ-ಶ್ರಮ್ ಕಾರ್ಡ್: ಜಿಲ್ಲೆಯಲ್ಲಿ 2.16 ಲಕ್ಷ ನೋಂದಣಿ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜೂನ್ 16:
ಅಸಂಘಟಿತ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ-ಶ್ರಮ್ ಕಾರ್ಡ್‍ಗೆ ಜಿಲ್ಲೆಯಲ್ಲಿ ಇದುವರೆಗೆ 2,16,483 ಜನರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕಾರ್ಮಿಕ ನಿರೀಕ್ಷಕ ಡಿ.ರಾಜಣ್ಣ ಹೇಳಿದರು.
ನಗರದ ತರಾಸು ರಂಗಮಂದಿರದಲ್ಲಿ ಬುಧವಾರ ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆ ಚಿತ್ರದುರ್ಗ ಜಿಲ್ಲಾ ಸಹಯೋಗದೊಂದಿಗೆ ಕರ್ನಾಟಕ ಗೃಹ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಯೋಜನೆಯಡಿ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಈ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರುತ್ತಿದೆ. ದೇಶದಲ್ಲಿ 156 ವಲಂiÀದಲ್ಲಿ ಅಸಂಘಟಿತ ಕಾರ್ಮಿಕರು ದುಡಿಯುತ್ತಿದ್ದಾರೆ. ರಾಜ್ಯದಲ್ಲಿ 43 ವಲಯದಲ್ಲಿ ಅಸಂಘಟಿತ ಕಾರ್ಮಿಕರಿದ್ದಾರೆ. ಅಸಂಘಟಿತ ಕಾರ್ಮಿಕರಿಗೆ ಅಂಬೇಡ್ಕರ್ ಸಹಾಯಹಸ್ತ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದರು.
ಕೋವಿಡ್‍ನ 2ನೇ ಅಲೆಯ ತಡೆಗೆ ಸರ್ಕಾರ ಲಾಕ್‍ಡೌನ್ ಘೋಷಿಸಿದ ಪರಿಣಾಮವಾಗಿ ಕಾರ್ಮಿಕರಿಗೆ ಆರ್ಥಿಕವಾಗಿ ನಷ್ಟವಾಗಿರುವುದನ್ನು ಗಮನಿಸಿ ಮುಖ್ಯಮಂತ್ರಿಗಳು ವಿವಿಧ ವಲಯಗಳ ಕಾರ್ಮಿಕ ವರ್ಗದವರಿಗೆ ಪರಿಹಾರ ಧನವನ್ನು ಘೋಷಿಸಿದ್ದರು. 11 ವರ್ಗಗಳ ಅಸಂಘಟಿತ ಕಾರ್ಮಿಕರಾದ ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‍ಗಳು, ಮೆಕ್ಯಾನಿಕ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು ಹಾಗೂ ಭಟ್ಟಿ ಕಾರ್ಮಿಕರಿಗೆ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ತಲಾ ರೂ.2000/-ಗಳ ಒಂದು ಬಾರಿ ನೆರವು ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನೂತನ್ ಸಂಸ್ಥೆ ಸಂಸ್ಥಾಪಕ ಜಿ.ರಾಘವೇಂದ್ರ, ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆ ಸಹ ಸಂಯೋಜಕರಾದ ನಿಶಾ ಸಿಸ್ಟರ್, ಬ್ರದರ್ ಜರ್ಸನ್, ನಾಗಮ್ಮ, ಲಲಿತ, ಎಂ.ಪುನೀತ್ ಆಚಾರ್, ಮಹಾಂತೇಶ್ ಆಚಾರ್, ಕಾರ್ಯಕರ್ತೆಯರದ ಕೆ.ಆರ್. ಗಂಗಮ್ಮ, ಶಾರದಮ್ಮ, ರಂಗಮ್ಮ, ಲಕ್ಷ್ಮೀ, ನಿರ್ಮಲಾ, ಆಶಾ ಇದ್ದರು.

 

 

[t4b-ticker]

You May Also Like

More From Author

+ There are no comments

Add yours