ಬೆಂಗಳೂರು, ಅ. 27: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಇಂದು (ಅಕ್ಟೋಬರ್ 27) ಕರ್ನಾಟಕ ಚುನಾವಣೆ ಆಯೋಗವು ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ್ದು, ಇದರ ಪ್ರಕಾರ 99.32 ಲಕ್ಷ ಮತಗಳು ಡಿಟೀಲ್ ಆಗಿವೆ. ಈ ಮೂಲಕ ರಾಜ್ಯದಲ್ಲಿದ್ದ ಒಟ್ಟು ಮತದಾರರ ಸಂಖ್ಯೆ 5.54 ಕೋಟಿಯಿಂದ 4.55 ಕೋಟಿಗೆ ಕುಸಿದಿದೆ. ಈ ಬೃಹತ್ ಪ್ರಮಾಣದ ಮತದಾರರ ಇಳಿಕೆ, ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಕ್ರಿಯೆ ಮತ್ತು ಅದರ ಪರಿಣಾಮಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.



