ಜೂನ್ 17 ರಂದು ಕೆ.ಡಿ.ಪಿ ಸಭೆ, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳ ಕಡ್ಡಾಯ ಹಾಜರಾಗಬೇಕು.

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.14: ಚಿತ್ರದುರ್ಗ ಜಿಲ್ಲಾ ಪಂಚಾಯತ್ 2023-24ನೇ ಸಾಲಿನ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜೂನ್ 17 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ. ವಿ. ರಾಮ್ ಪ್ರಸಾತ್ ಸಭೆಯ ಅಧ್ಯಕ್ಷತೆ ವಹಿಸುವರು.
ಎಲ್ಲಾ ಇಲಾಖೆ ಮುಖ್ಯಸ್ಥರು ದಿನಾಂಕ 14-06-2023 ಮಧ್ಯಾಹ್ನ 3ಗಂಟೆಗೆ ಒಳಗೆ ಇಲಾಖೆಗೆ ಸಂಬಂಧಿಸಿದ ಮಾಹಿತಿಯನ್ನು  ಜಿಲ್ಲಾ ಪಂಚಾಯಿತಿ ಯೋಜನಾ ಶಾಖೆಗೆ ಸಲ್ಲಿಸಬೇಕು. ಕೆ.ಡಿ.ಪಿ ಸಭೆಯಂದು ಜಿಲ್ಲಾ ಮಟ್ಟದ  ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು  ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours