ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಸರಳ ಆಚರಣೆ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಅಕ್ಟೋಬರ್ 23:
      ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆಯನ್ನು ನಗರದ ತ.ರಾ.ಸು ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಸಂಸ್ಕ್ರತಿ ಇಲಾಖೆ ಹಾಗೂ ನಗರ ಸಭೆ ವತಿಯಿಂದ ಸರಳವಾಗಿ ಆಚರಿಸಲಾಯಿತು.
ವಿಧಾನ ಪರಿಷತ್ ಉಪ ಸಭಾಪತಿಗಳಾದ ಆನಂದ್ ಚಂದ್ರಶೇಖರ್ ಮಾಮನಿ ಅವರು ನಿಧನರಾದ ಹಿನ್ನಲೆಯಲ್ಲಿ, ಈ ಬಾರಿಯ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಸರಳವಾಗಿ ಚನ್ನಮ್ಮಾಜಿಯ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸುವುದರ ಮೂಲಕ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.  ಆನಂದ್ ಮಾಮನಿ ಅವರ ನಿಧನಕ್ಕೆ ಸಂತಾಪ ಸೂಚಿಸಿ, ಗಣ್ಯರಿಂದ ಎರಡು ನಿಮಿಷ ಮೌನ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ. ರಂಗಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ. ಮಲ್ಲಿಕಾರ್ಜುನ್, ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಕಾಶ್, ರಂಗಕರ್ಮಿ ಕೆಪಿಎಂ ಗಣೇಶಯ್ಯ, ಇತಿಹಾಸ ಸಂಶೋಧಕ ಡಾ. ಬಿ. ರಾಜಶೇಖರಪ್ಪ, ವೀರಶೈವ ಸಮಾಜದ ಜಿಲ್ಲಾಧ್ಯಕ್ಷ ರಾಜಶೇಖರಪ್ಪ, ಮೋಕ್ಷಾ ರುದ್ರಸ್ವಾಮಿ, ರುದ್ರಾಣಿ ಗಂಗಾಧರ್,  ಷಣ್ಮುಖಪ್ಪ, ಹಾಗೂ ಸಮಾಜದ ಮುಖಂಡರು ಇದ್ದರು.
[t4b-ticker]

You May Also Like

More From Author

+ There are no comments

Add yours