ಸತ್ಯನಾರಾಯಣ ಪೂಜೆ, ಗುರುಪೂಜೆ ಹಾಗೂ ಧಾರ್ಮಿಕಸಭೆ-ಸಾಧಕರಿಗೆ ಗೌರವ ಸನ್ಮಾನ
ಕೊಕ್ರಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕೊಕ್ರಾಡಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ೧೭೧ನೇ ಗುರುಜಯಂತಿ ಆಚರಣೆಯ ಅಂಗವಾಗಿ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರುಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಫೆ. 1ರಂದು ಬೆಳಿಗ್ಗೆ 8-30ರಿಂದ ಕೊಕ್ರಾಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 8-30ಕ್ಕೆ ಸತ್ಯನಾರಾಯಣ ಪೂಜೆ, ಗುರು ಪೂಜೆ ನಡೆಯಲಿದೆ. ಬಳಿಕ 11-30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಂಘದ ಅಧ್ಯಕ್ಷರಾದ ಮಂಜಪ್ಪ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ. ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಅಂಡಿಂಜೆ ಗ್ರಾ.ಪಂ. ಅಧ್ಯಕ್ಷ ನಿತಿನ್ ಮುಡೇವು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣ, ಅಂತರರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ್ತಿ ಕು. ಧನಲಕ್ಷ್ಮೀ ಪೂಜಾರಿ ಅವರಿಗೆ ಗೌರವ ಸನ್ಮಾನ ನಡೆಯಲಿದೆ ಎಂದು ಕಾರ್ಯದರ್ಶಿ ಉಮೇಶ್ಚಂದ್ರ ಅಂಬಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





