ವೇಣೂರು: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆದ ೧೨ನೇ ವರ್ಷದ ಕೋಟಿ ಚೆನ್ನಯ್ಯ ಕ್ರೀಡಾಕೂಟದಲ್ಲಿ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸಂಘವು ಅವಳಿ ಪ್ರಶಸ್ತಿ ಪಡೆದುಕೊಂಡಿದೆ.
ಪುರುಷರ ಶಟ್ಲ್, ಬ್ಯಾಡ್ಮಿಂಟನ್ನಲ್ಲಿ ಪ್ರಥಮ, ಮಹಿಳೆಯರ ಶಟ್ಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಥಮ, ಮಹಿಳೆಯರ ಕಬ್ಬಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ಬಾಲಕ ಮತ್ತು ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತದೆ.
ಸ್ಪರ್ಧಾ ವಿಜೇತರನ್ನು ವೇಣೂರು ಬಿಲ್ಲವ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್ ಪೊಕ್ಕಿ ಮತ್ತು ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಮಾರ್ ಅಭಿನಂದಿಸಿರುತ್ತಾರೆ.






