ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವ ನಾರಾಯಣ್ ಇನ್ನಿಲ್ಲ

 

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ (Dhruva Narayan) ಅವರು ಶನಿವಾರ ಮೃತಪಟ್ಟಿದ್ದಾರೆ.
ಧ್ರುವ ನಾರಾಯಣ್‌ (62) ಅವರು ಶನಿವಾರ ಹೃದಯಾಘಾತದಿಂದ ಮೈಸೂರಿನಲ್ಲಿ ನಿಧನರಾಗಿದ್ದಾರೆ. 1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
1983 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಧ್ರುವನಾರಾಯಣ್‌ 1984 ರಲ್ಲಿ ಜಿಕೆವಿಕೆಯ ಎನ್ ಎಸ್ ಯುಐ ಅಧ್ಯಕ್ಷನಾಗಿ ಆಯ್ಕೆಯಾದರು. ನಂತರ 1986 ರಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು, ಆದರೆ 1999ರಲ್ಲಿ ಮೊದಲ ಬಾರಿಗೆ ಸಂತೆಮಾರಳ್ಳಿ ಕ್ಷೇತ್ರದಿಂದ ವಿಧಾನಸಭೆಗೆ ಮೊದಲ ಬಾರಿ ಸ್ಪರ್ಧಿಸಿ ಸೋಲನ್ನನುಭವಿಸಿದ್ದರು. ಆದರೆ 2004 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ 1 ಮತದ ಅಂತರದ ಗೆಲುವು ಸಾಧಿಸಿ ಇತಿಹಾಸವನ್ನು ಸೃಷ್ಟಿಸಿದ್ದರು.
[t4b-ticker]

You May Also Like

More From Author

+ There are no comments

Add yours