ಪದವೀಧರರಿಗೆ ಸಿಹಿ ಸುದ್ದಿ. kPSC ಮೂಲಕ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಬೆಂಗಳೂರು, ಆಗಸ್ಟ್ 24: ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ‘ಸಿ’ ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಪದವೀಧರರಿಗೆ ಹಲವಾರು ಹುದ್ದೆಗಳಿವೆ.

ಆಸಕ್ತ ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 19/9/2020 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕಗಳನ್ನು ಪಾವತಿ ಮಾಡಲು 21/9/2020 ಕೊನೆಯ ದಿನವಾಗಿದೆ.

ಪದವಿ ವಿದ್ಯಾರ್ಹತೆ ಮತ್ತು ಪದವಿ ಪೂರ್ವ ವಿದ್ಯಾರ್ಹತೆ ಎಂದು ಎರಡು ಹಂತದಲ್ಲಿ ಹುದ್ದೆಗಳನ್ನು ವಿಭಾಗ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಸುವ ಮೊದಲು ಆಯೋಗ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಓದಿಕೊಳ್ಳಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

[t4b-ticker]

You May Also Like

More From Author

+ There are no comments

Add yours