KPSC ಮೂಲಕ 169 ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಬೆಂಗಳೂರು: ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.  ಕೆಪಿಎಸ್ ಸಿ (KPSC) ಮೂಲಕ  ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಎಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿ 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನು ಓದಿ:ಕೆರೆ ಕೋಡಿ ಬಿದ್ದ ನೀರಲ್ಲಿ ಕೈ ಕಾಲು ತೊಳೆಯಲು ಹೋಗಿ ಕೊಚ್ಚಿ ಹೋದ ಯುವಕರು

ಜಲಸಂಪನ್ಮೂಲ ಇಲಾಖೆಯ ಒಟ್ಟು 166 (ಸಿವಿಲ್) ಹಾಗೂ 03 (ಮೆಕ್ಯಾನಿಕಲ್) ಕಿರಿಯ ಎಂಜಿನಿಯರ್ ಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರ ಹುದ್ದೆಗಳನ್ನು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲಾಗುವುದು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೆಪಿಎಸ್ ಸಿ ಮೂಲಕ  ಒಟ್ಟು 332 ಹುದ್ದೆಗಳ ಭರ್ತಿ ಮಾಡಲು  ಅರ್ಜಿ ಸಲ್ಲಿಸುವ ಪ್ರಕ್ರಿಯೆ ಅ.19 ರಿಂದ ಆರಂಭವಾಗಲಿದ್ದು, ನವೆಂಬರ್ 17 ಕೊನೆಯ ದಿನವಾಗಿದೆ. ಮೂರು ಹಂತಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಹಾಗೂ ಶುಲ್ಕ ಪಾವತಿ ಮಾಡಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್ ಸೈಟ್ ಮೂಲಕ ಪಡೆಯಬಹದು. ಎಲ್ಲಾ ದಾಖಲೆ ಸಮೇತ ಅರ್ಜಿ‌ಸಲ್ಲಿಸಲು ಹೆಚ್ಚಿನ‌ ವಿವತಗಳಿಗೆ ಈ ವೆಬ್ ಸೈಟ್ ಸಂಪರ್ಕಿಸಿ  www.kpsc.com ಪಡೆಯಬಹುದು. 

[t4b-ticker]

You May Also Like

More From Author

+ There are no comments

Add yours