ಕುಕ್ಕೇಡಿ: ಗ್ರಾಮ ಪಂಚಾಯತ್ಗೆ ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಅನಿತಾ ಕೆ, ಪಂಚಾಯತ್ ಸದಸ್ಯರುಗಳು, ತಾ.. ಕಾರ್ಯನಿರ್ವಾಹಣಾ ಅಧಿಕಾರಿ, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ್ ಡಿ. ಎಲ್ಲರನ್ನೂ ಸ್ವಾಗತಿಸಿ, ಧನ್ಯವಾದವಿತ್ತರು, ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.






