ವೇಣೂರು: ದಸರಾ ಗ್ರಾಮೀಣ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸಮಿತಿ ಕುಕ್ಕೇಡಿ-ನಿಟ್ಟಡೆ ಇದರ ವತಿಯಿಂದ ಕುಕ್ಕೇಡಿ, ನಿಟ್ಟಡೆ, ವೇಣೂರು, ಹಾಗೂ ಗರ್ಡಾಡಿ ಗ್ರಾಮದ ಸಾರ್ವಜನಿಕರು ಹಾಗೂ ಮಕ್ಕಳಿಗೆ ಕೆಸರ್ದ ಗೊಬ್ಬು-2026 ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ದೋಸೆಹಬ್ಬವು ಕುಕ್ಕೇಡಿ ಮಂಜುಶ್ರೀ ಭಜನ ಮಂದಿರ ಸನಿಹದ ಗದ್ದೆಯಲ್ಲಿ ನ. 8ರಂದು ಜರಗಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಸತೀಶ್ ಅಂಚನ್ ಹಾಗೂ ಕಾರ್ಯದರ್ಶಿ ವಿಠಲ ಪೂಜಾರಿ ಬುಳೆಕ್ಕಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 9-30ಕ್ಕೆ ನಿವೃತ್ತ ಶಿಕ್ಷಕ ನೇಮಿರಾಜ್ ಅವರು ಉದ್ಘಾಟನೆ ನೆರವೇರಿಸಲಿದ್ದು, ಕುಕ್ಕೇಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಅಶೋಕ್ ಪಾಣೂರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಜೆ ೫ ಗಂಟೆಗೆ ಸಮಾರೋಪ ನಡೆಯಲಿದ್ದು, ಬೆಳ್ತಂಗಡಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಅಧ್ಯಕ್ಷತೆ ವಹಿಸಲಿದ್ದಾರೆ. ಪೆರಾಡಿ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ಕಂಬಳ ಕೋಣಗಳ ಯಜಮಾನ ಗಣೇಶ್ ನಾರಾಯಣ ಪಂಡಿತ್, ಸಂತೋಷ್ ಕುಮಾರ್ ಜೈನ್ ಪಡಂಗಡಿ, ವೇಣೂರು-ಪೆರ್ಮುಡ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಡಾ. ಶಾಂತಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.



