ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ. ಪುತ್ತೂರು ಇದರ ಉಪ್ಪಿನಂಗಡಿ ಶಾಖೆಯ ಸ್ಥಳಾಂತರಗೊಂಡು ಉದ್ಘಾಟನೆ ಹಾಗೂ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಮಾ. 1ರಂದು ಬೆಳಿಗ್ಗೆ 10-30ರಿಂದ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿಯ ರಾಮ ಗೋಪಾಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.
ಶಾಖೆಯ ಕಟ್ಟಡ ಕೋಣೆ ಉದ್ಘಾಟನೆಯನ್ನು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರು ನೆರವೇರಿಸಲಿದ್ದು, ಸಂಘದ ಅಧ್ಯಕ್ಷರಾದ ನ್ಯಾಯವಾದಿ ಭಾಸ್ಕರ ಎಂ. ಪೆರುವಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಹಲವು ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಜನಾರ್ಧನ ಮೂಲ್ಯ ತಿಳಿಸಿದ್ದಾರೆ.





