ಜ. 4ರಂದು ಪುರಭವನದಲ್ಲಿ ಅದ್ದೂರಿ ಕಾರ್ಯಕ್ರಮ, ಗಣ್ಯಾತಿಗಣ್ಯರ ಸಮಾಗಮ
ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ದ.ಕ. ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ.) ಮಂಗಳೂರು ಸಹಯೋಗದಲ್ಲಿ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಪದಗ್ರಹಣ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ವೈಭವ, ಸಾಧಕರಿಗೆ ಸನ್ಮಾನ ಹಾಗೂ ಆಸಕ್ತರಿಗೆ ನೆರವು ಕಾರ್ಯಕ್ರಮವು ಜ. 4, 2026ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ.
ನಡುಬೊಟ್ಟು ಶ್ರೀ ಉದ್ಭವ ರೌದ್ರನಾಥೇಶ್ವರ ದೈವಸ್ಥಾನದ ಧರ್ಮದರ್ಶಿ ಡಾ. ರವಿ ಎನ್. ಅವರು ದೀಪ ಪ್ರಜ್ವಲನೆ ಮಾಡಲಿದ್ದು, ಮುಳಿಯ ಶ್ರೀ ವೈಷ್ಣವಿ ಕ್ಷೇತ್ರದ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿ ದಿವ್ಯ ಉಪಸ್ಥಿತಿ ಇರಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಅಧ್ಯಕ್ಷರು, ದಾಸ್ ಪ್ರೊಮೊಸನ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಲ. ಅನಿಲ್ದಾಸ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದರುಗಳಾದ ಯಧುವೀರ್ ಒಡೆಯರ್, ಕ್ಯಾ. ಬ್ರಿಜೇಶ್ ಚೌಟ ಸೇರಿದಂತೆ ಹಲವು ಗಣ್ಯಾತಿಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.









