ವೇಣೂರು: ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆ ಮತ್ತು ಕಾಲೇಜು ನಿಟ್ಟಡೆ ವೇಣೂರು ಇಲ್ಲಿ ನ. ೧೫ರಂದು ಪ್ರತಿಭಾ ಕಾರಂಜಿ ಸ್ಪರ್ಧೆಗಳು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಪೂರ್ವಸಿದ್ದತಾ ಸಭೆ ನಡೆಯಿತು.
ಶಾಲಾ ಸಂಸ್ಥಾಪಕ ಗಿರೀಶ್ ಕೆ.ಎಚ್.ರವರ ಮಾರ್ಗದರ್ಶನದಲ್ಲಿ ನಡೆದ ಈ ಸಭೆಯಲ್ಲಿ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರಾದ ಚಂದ್ರಶೇಖರ್, ಕುಂಭಶ್ರೀ ವೈಭವ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಕುಂಭಶ್ರೀ ವೈಭವ ಸಮಿತಿಯ ಅಧ್ಯಕ್ಷರಾದ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದರು. ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ಉಪಸ್ಥಿತರಿದ್ದು, ಆ ದಿನದ ಖರ್ಚು ವೆಚ್ಚದ ಬಗ್ಗೆ ವಿವರಿಸಿದರು. ಒಟ್ಟಿನಲ್ಲಿ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರ ಮತ್ತು ಸದಸ್ಯರುಗಳು ಅಂತಿಮ ತೀರ್ಮಾನದಂತೆ ಪ್ರತಿ ಪೋಷಕರ ಸಹಾಯದಿಂದ ಈ ಕಾರ್ಯಕ್ರಮವನ್ನು ನಡೆಸುವುದೆಂದು ತೀರ್ಮಾನಿಸಿದರು. ಸಭೆಯಲ್ಲಿ ಎಲ್ಲಾ ಮುಖ್ಯೋಪಾಧ್ಯಾಯನಿಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.





