ದಿವಂಗತ ಡಿ.ದೇವರಾಜ ಅರಸುರವರ ಜಯಂತಿಯನ್ನು ಜಿಲ್ಲಾಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು-ಎನ್.ಆರ್ ಶೇಖರ್

 

ವರದಿ: ಮಹಂತೇಶ್ ಮೊಳಕಾಲ್ಮುರು

ಮೊಳಕಾಲ್ಮುರು:- ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸುರವರ ಜಯಂತಿಯನ್ನು ಜಿಲ್ಲಾಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು-ಎನ್.ಆರ್ ಶೇಖರ್

ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರರಾದ ದಿವಂಗತ ಡಿ.ದೇವರಾಜ ಅರಸುರವರ ಜನ್ಮದಿನಾಚರಣೆಯನ್ನು ಆಗಸ್ಟ್ 20 ರಿಂದ 23ರವರೆಗೂ ಜಿಲ್ಲೆಯಲ್ಲಿ ಅರ್ಥಪೂರ್ಣ ಮತ್ತು ವಿಜೃಂಭಣೆಯಿಂದ ಆಯೋಜಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿರ್ಧರಿಸಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎನ್.ಆರ್ ಶೇಖರ್ ತಿಳಿಸಿದರು.

ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಬುಧವಾರದಂದು ತಾಲೂಕು ಆಡಳಿತದಿಂದ ಕರೆಯಲಾಗಿದ್ದ ದೇವರಾಜ್ ಅರಸುರವರ 107ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆ ಮಾತನಾಡಿದರು.

ಸರ್ಕಾರವು ಈ ವರ್ಷ ವಿಶೇಷವಾಗಿ ದೇವರಾಜ ಅರಸುರವರ ಜನ್ಮ ದಿನಾಚರಣೆಯನ್ನು ಆಚರಿಸಲು ನಿರ್ಧರಿಸಿದೆ.ಬಡಗಿ ಕುಂಬಾರ ಕಮ್ಮಾರ ವಿಶ್ವಕರ್ಮ ಇತ್ಯಾದಿ ಹಿಂದುಳಿದ ವರ್ಗಗಳ ಸಮುದಾಯಗಳು ತಯಾರಿಸಲ್ಪಟ್ಟ ವಸ್ತುಪ್ರದರ್ಶನ ಮತ್ತು ಮೂರು ದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ.

ಹಿಂದುಳಿದ ವರ್ಗಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸಾಧನೆಗೈದ ಅರ್ಹರಿಗೆ ಜಿಲ್ಲಾಮಟ್ಟದಲ್ಲಿ ಮೊದಲನೇ ಬಾರಿಗೆ ಡಿ.ದೇವರಾಜು ಅರಸು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಕ್ಷೇತ್ರದ ಶಾಸಕರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತ್ತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಿಂದುಳಿದ ವರ್ಗಗಳ ಮುಖಂಡರು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಂದಿನ ದಿನ ತಾಲೂಕು ಕೇಂದ್ರದಲ್ಲಿ ಸಾಂಕೇತಿಕವಾಗಿ ಮಾತ್ರ ಜಯಂತಿ ಕಾರ್ಯಕ್ರಮ ಆಚರಿಸಿ ನಂತರ ಜಿಲ್ಲಾಮಟ್ಟದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಗುವುದು ಎಂದರು.

ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಸುರೇಶ್ ಕುಮಾರ್ ವಹಿಸಿದ್ದರು.ಈ ಸಂದರ್ಭದಲ್ಲಿ ತಾಪಂ ಇ.ಓ.ಕೆಓ ಜಾನಕಿರಾಮ್ ಬಿಇಓ ವೆಂಕಟೇಶ್ ಪಶು ಇಲಾಖೆಯ ಡಾ.ರಂಗಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಹಿಂದುಳಿದ ವರ್ಗಗಳ ಸಮುದಾಯದ ಮುಖಂಡರು ಮತ್ತಿತರಿದ್ದರು.

[t4b-ticker]

You May Also Like

More From Author

+ There are no comments

Add yours