ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ: ಪ್ರಕಟಣೆ ಹೊರಡಿಸಿದ ಕಾಂಗ್ರೆಸ್

 

 

ಬೆಂಗಳೂರು:ಕರ್ನಾಟಕ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಬಿಜೆಪಿಯು ಸಮರ್ಥ ವಿರೋಧ ಪಕ್ಷದ ನಾಯಕನ ಹುಟುಕಾಟದಲ್ಲಿದೆ. ಚುನಾವಣೆ ಮುಗಿದು ೫೦ ದಿನಗಳಾದರೂ ವಿರೋಧ ಪಕ್ಷದ ನಾಯಕನನ್ನು ನೇಮಿಸುವಲ್ಲಿ ವಿಫಲವಾಗಿರುವ ಬಿಜೆಪಿಯನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ‘ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ’ ಎಂದು ಪ್ರಕಟಣೆ ಹೊರಡಿಸಿದೆ.

‘ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಖSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ’ ಎಂದು ಕೆಪಿಸಿಸಿ ಟ್ವೀಟ್ ಮಾಡಿದೆ.

‘ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ’ ಎಂದು ಕಾಂಗ್ರೆಸ್ ಹೇಳಿದೆ.

‘ಚುನಾವಣೆ ಮುಗಿದು ೫೦ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮAಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು

ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ’ ಎಂದು ಟೀಕಿಸಿದೆ.

ಬಿಜೆಪಿ ಪಕ್ಷ ಆಡಳಿತ ಮಾಡಲು ನಾಲಾಯಕ್ ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ, ಈಗ ವಿರೋಧ ಪಕ್ಷವಾಗಿರಲೂ ಸಹ ನಾಲಾಯಕ್ ಎಂದು ತಿಳಿಯುತ್ತಿದೆ. ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನು ಎದುರು ನೋಡುತ್ತಿದ್ದೇವೆ. ನಮ್ಮ ಆಸೆ ಈಡೇರುತ್ತದೋ ಇಲ್ಲವೋ ಗೊತ್ತಿಲ್ಲ ಎಂದೂ ಕಾಂಗ್ರೆಸ್ ಹೇಳಿದೆ.

ಇಂದು ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ

ರಾಜ್ಯ ವಿಧಾನಸಭೆಯಲ್ಲಿ ತನ್ನ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಮುಂದಾಗಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವರಾದ ಆರ್ ಅಶೋಕ್ ಹಾಗೂ ಸುನೀಲ್ ಕುಮಾರ್ ಅವರು ರೇಸ್‌ನ ಮುಂಚೂಣಿಯಲ್ಲಿದ್ದಾರೆ.

ಕಮಲ ಪಾಳಯದಲ್ಲಿ ಗುದ್ದಾಟ

ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಕಮಲ ಪಾಳಯದಲ್ಲಿ ಬಂಡಾಯದ ಬೆಂಕಿ ಹೊತ್ತಿಕೊಂಡಿದೆ. ಇದು ಮೇಲ್ನೋಟಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ನಡುವಿನ ಸಂಘರ್ಷದಂತೆ ಭಾಸವಾಗುತ್ತಿದೆ.

ಮಾಜಿ ಸಚಿವ ಸಿಟಿ ರವಿ, ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ಹೊಂದಾಣಿಕೆ ರಾಜಕೀಯದ ಬಗ್ಗೆ ಮಾತನಾಡಿದ್ದಾರೆ. ಇದು ಬಿಜೆಪಿಯಲ್ಲಿನ ಒಳಸಂಘರ್ಷಕ್ಕೆ ಕಾರಣವಾಗಿದೆ.

 

 

[t4b-ticker]

You May Also Like

More From Author

+ There are no comments

Add yours