ಬೆಂಗಳೂರು: ಎಲ್ಲಾ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಕೆಲಸಗಳನ್ನು 25 ದಿನಗಳಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಗಳ ಪ್ರತಿಯೊಂದು ಸಮಸ್ಯೆಗಳನ್ನು ಪಟ್ಟಿ ಮಾಡಿ ಸಲ್ಲಿಸಿ. ಜಿಲ್ಲಾ ಉಸ್ತುವಾರಿ ಸಚಿವರು ಆ ಬಗ್ಗೆ ಗಮನಹರಿಸುವಂತೆ ಸೂಚಿಸಲಾಗುವುದು. ಎಲ್ಲಾ ಜಿಲ್ಲಾ ಕಾರ್ಯದರ್ಶಿಗಳು ಇಲಾಖೆಗೆ ಸಂಬಂಧಿಸಿದಂತೆ ಬಾಕಿ ಇರುವ ಕೆಲಸಗಳ ಪಟ್ಟಿಯನ್ನು ಒದಗಿಸಬೇಕು. ಇದಲ್ಲದೆ, 25 ದಿನಗಳೊಳಗೆ, ಬಾಕಿ ಕೆಲಸಗಳ ಜೊತೆಗೆ, ಆಯಾ ಜಿಲ್ಲೆಗೆ ಸಂಬಂಧಿಸಿದಂತೆ ಹೊಸದಾಗಿ ಏನು ಮಾಡಬಹುದು, ಆರ್ಥಿಕ ವ್ಯವಸ್ಥೆಯ ಮಿತಿಯೊಳಗೆ ಯಾವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂಬುದರ ಪಟ್ಟಿಯನ್ನೂ ಸಲ್ಲಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.
ನನಗೆ ಇತಿಹಾಸ ಬರೆಯಲು ಅಥವಾ ಓದಲು ಇಷ್ಟವಿಲ್ಲ. ಇತಿಹಾಸ ನಿರ್ಮಾಣ ಮಾಡಬೇಕು. ಏನಾದರೂ ಸಾಕ್ಷಿ ಗುಡ್ಡಗಳನ್ನು ಬಿಟ್ಟು ಹೋಗಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಕಾರಾತ್ಮಕ ಮನೋಭಾವ ಮತ್ತು ವ್ಯವಸ್ಥೆಯೊಳಗೆ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಕೆಲಸ ಮಾಡುವಂತೆ ಅವರು ಕರೆ ನೀಡಿದ್ದಾರೆ.





