ಲೋಕಸಭೆ ಚುನಾವಣೆ:ಅಧಿಕಾರಿಗಳು ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಿ- ವೆಂಕಟೇಶ್ ಟಿ.

 

ಚಿತ್ರದುರ್ಗ ಫೆ. 20 (ಕರ್ನಾಟಕ ವಾರ್ತೆ) :
ಮುಂಬರುವ ಲೋಕಸಭೆ ಚುನಾವಣಾ ಕಾರ್ಯಗಳಿಗೆ ಈಗಾಗಲೆ ನಿಯೋಜನೆಗೊಂಡಿರುವ ವಿವಿಧ ತಂಡಗಳ ಅಧಿಕಾರಿ, ಸಿಬ್ಬಂದಿಗಳು ಅತ್ಯಂತ ಜಾಗರೂಕತೆಯಿಂದ, ನಿಸ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಸೂಚನೆ ನೀಡಿದರು.
ಲೋಕಸಭೆ ಚುನಾವಣೆ ಸಂಬಂಧ ರಾಜ್ಯ ಚುನಾವಣಾ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಏರ್ಪಡಿಸಿದ ವಿಡಿಯೋ ಸಂವಾದ ಸಭೆಯ ಸಂದರ್ಭದಲ್ಲಿ ಅವರು ಮಾತನಾಡಿದರು.
ಬರುವ ಲೋಕಸಭೆ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ಈಗಾಗಲೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಚುನಾವಣೆಯ ಮಾದರಿ ನೀತಿ ಸಂಹಿತೆಯ ಪಾಲನೆ ಬಗ್ಗೆ ತೀವ್ರ ನಿಗಾ ವಹಿಸಲು ಈಗಾಗಲೆ ಸೆಕ್ಟರ್ ಅಧಿಕಾರಿಗಳ ನೇಮಕ ಸಹ ಮಾಡಲಾಗಿದೆ. ಎಂಸಿಸಿ, ಎಂಸಿಎಂಸಿ, ವಿಡಿಯೋ ಸರ್ವೆಲೆನ್ಸ್, ಸ್ಟ್ಯಾಟಿಕ್ ಸರ್ವೆಲೆನ್ಸ್, ನೋಡಲ್ ಅಧಿಕಾರಿಗಳು ಸೇರಿದಂತೆ ವಿವಿಧ ತಂಡಗಳನ್ನು ರಚಿಸಲಾಗಿದೆ.  ಅಲ್ಲದೆ ಆಯಾ ತಂಡಗಳಿಗೆ ಲೋಕಸಭಾ ಚುನಾವಣಾ ಕರ್ತವ್ಯ ಕುರಿತು ಕಾಲ ಕಾಲಕ್ಕೆ ತರಬೇತಿಗಳನ್ನು ಆಯೋಜಿಸಲಾಗುತ್ತಿದೆ.  ಅಧಿಕಾರಿಗಳು ತಮಗೆ ವಹಿಸಿದ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಬೇಕು.  ಯಾವುದೇ ಲೋಪದೋಷಗಳಿಗೆ, ದೂರುಗಳಿಗೆ ಅವಕಾಶ ನೀಡಬಾರದು.  ಚುನಾವಣಾ ಮಾದರಿ ನೀತಿ ಸಂಹಿತೆ, ಚುನಾವಣಾ ಖರ್ಚು ವೆಚ್ಚಗಳ ನಿರ್ವಹಣೆ ವಿಷಯ ಸೇರಿದಂತೆ ಚುನಾವಣಾ ಕರ್ತವ್ಯಗಳು ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ಕೈಗೊಳ್ಳಲು ಅಧಿಕಾರಿಗಳು ತಂಡದ ರೂಪದಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ಬಿ. ಆನಂದ್, ಅಬಕಾರಿ ಉಪ ಆಯುಕ್ತ ಮಾದೇಶ್, ಡಿಯುಡಿಸಿ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಚುನಾವಣಾ ವಿಭಾಗದ ಮಲ್ಲಿಕಾರ್ಜುನ್ ಸೇರಿದಂತೆ ತಾಲ್ಲೂಕುಗಳ ತಹಸಿಲ್ದಾರರು ಸಭೆಯಲ್ಲಿ ಉಪಸ್ಥಿತರಿದ್ದರು.
[t4b-ticker]

You May Also Like

More From Author

+ There are no comments

Add yours