ಲೋಕಾಯುಕ್ತ ಅಧಿಕಾರಿಗಳ‌ ಜಿಲ್ಲಾ ಪ್ರವಾಸ

 

 

 

 

ಚಿತ್ರದುರ್ಗ, ಅಕ್ಟೋಬರ್07:
 ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಅಕ್ಟೋಬರ್ 9 ರಂದು ಚಳ್ಳಕೆರೆ, 16 ರಂದು ಮೊಳಕಾಲ್ಮುರು, 19 ರಂದು ಹೊಸದುರ್ಗ, 21 ರಂದು ಹಿರಿಯೂರು ಹಾಗೂ 23 ರಂದು ಹೊಳಲ್ಕೆರೆ ಪ್ರವಾಸ ಹಮ್ಮಿಕೊಂಡಿದ್ದಾರೆ.
  ಅಕ್ಟೋಬರ್ 9 ರಂದು ಚಳ್ಳಕೆರೆ ಪ್ರವಾಸ ಹಮ್ಮಿಕೊಂಡಿದ್ದ ಅಂದು ಬೆಳಿಗ್ಗೆ 11 ರಿಂದ 1.30ರವರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರಿಂದ ದೂರು,ಅಹವಾಲುಗಳನ್ನು ನಿಗಧಿತ ಅರ್ಜಿ ನಮೂನೆಯಲ್ಲಿ  ಸ್ವೀಕರಿಸುವರು.
ಅಕ್ಟೋಬರ್ 16 ರಂದು ಮೊಳಕಾಲ್ಮುರು ಪ್ರವಾಸ ಹಮ್ಮಿಕೊಂಡಿದ್ದು, ಅಂದು ಬೆಳಿಗ್ಗೆ 11 ರಿಂದ 1.30 ರವರೆಗೆ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿಯಲ್ಲಿ ಸಾರ್ವಜನಿಕರಿಂದ ದೂರು,ಅಹವಾಲುಗಳನ್ನು ನಿಗಧಿತ ಅರ್ಜಿ ನಮೂನೆಯಲ್ಲಿ  ಸ್ವೀಕರಿಸುವರು.
ಅಕ್ಟೋಬರ್ 19 ರಂದು ಹೊಸದುರ್ಗ ಪ್ರವಾಸ ಹಮ್ಮಿಕೊಂಡಿದ್ದು, ಅಂದು ಬೆಳಿಗ್ಗೆ 11 ರಿಂದ 1.30ರವರೆಗೆ ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರಿಂದ ದೂರು,ಅಹವಾಲುಗಳನ್ನು ನಿಗಧಿತ ಅರ್ಜಿ ನಮೂನೆಯಲ್ಲಿ  ಸ್ವೀಕರಿಸುವರು.
ಅಕ್ಟೋಬರ್ 21 ರಂದು ಹಿರಿಯೂರು ಪ್ರವಾಸ ಹಮ್ಮಿಕೊಂಡಿದ್ದು, ಅಂದು ಬೆಳಿಗ್ಗೆ 11 ರಿಂದ 1.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರಿಂದ ದೂರು,ಅಹವಾಲುಗಳನ್ನು ನಿಗಧಿತ ಅರ್ಜಿ ನಮೂನೆಯಲ್ಲಿ  ಸ್ವೀಕರಿಸುವರು.
ಅಕ್ಟೋಬರ್ 23 ರಂದು ಹೊಳಲ್ಕೆರೆ ಪ್ರವಾಸ ಹಮ್ಮಿಕೊಂಡಿದ್ದು, ಅಂದು ಬೆಳಿಗ್ಗೆ 11 ರಿಂದ 1.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರಿಂದ ದೂರು,ಅಹವಾಲುಗಳನ್ನು ನಿಗಧಿತ ಅರ್ಜಿ ನಮೂನೆಯಲ್ಲಿ  ಸ್ವೀಕರಿಸುವರು.
   ಸರ್ಕಾರವು ಸಾರ್ವಜನಿಕರಿಗಾಗಿ ರೂಪಿಸಲಾಗಿರುವ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸದೆ ಇರುವುದು ಮತ್ತು ಅಂತಹ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಸರ್ಕಾರಿ ಅಧಿಕಾರಿಗಳು ಅನಾವಶ್ಯಕ ವಿಳಂಬ ಮಾಡುತ್ತಿರುವುದು, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯತನ ಮತ್ತು ತಾರತಮ್ಯ ತೋರುವುದು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇರುವುದು ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲವು ಸಾರ್ವಜನಿಕ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿ ದುರಾಡಳಿತ ನಡೆಸುತ್ತಿರುವುದು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ನಮೂನೆ 1 ಮತ್ತು 2 ರಲ್ಲಿ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಬಹುದು.
  ಯಾವುದೇ ನ್ಯಾಯಾಲಯಗಳಲ್ಲಿ ಹಾಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಕುರಿತು ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours