ನಾಳೆ ಚಂದ್ರವಳ್ಳಿ ಮೈದಾನದಲ್ಲಿ ಮಹಿಳಾ ಮೋರ್ಚಾ ಸಮಾವೇಶ

 

 

 

 

ಚಿತ್ರದುರ್ಗ: ನಗರದ ಹೊರವಲಯದಲ್ಲಿರುವ ಚಂದ್ರವಳ್ಳಿ ಮೈದಾನದಲ್ಲಿ ಫೆ. 25 ರ ಇಂದು ಬೆಳಿಗ್ಗೆ 11 ಗಂಟೆಗೆ ಮಹಿಳಾ ಮೋರ್ಚಾ ಸಮಾವೇಶ ನಡೆಯಲಿದೆ ಎಂದು ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದರು.

 

 

ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ವಿವಿಧ ಸೌಲತ್ತುಗಳನ್ನು ಪಡೆದಿರುವ ಜಿಲ್ಲೆಯ ಮಹಿಳಾ ಫಲಾನುಭವಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಪ್ರತಿ ಮಂಡಲದಿಂದ ಒಟ್ಟು ಹದಿನೈದು ಸಾವಿರ ಮಹಿಳೆಯರು ಭಾಗವಹಿಸುವ ನಿರೀಕ್ಷೆಯಿದ್ದು, ರಾಷ್ಟ್ರೀಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವಿಜಯಲಕ್ಷ್ಮಿ, ನಟಿ ತಾರ, ಸಮಾವೇಶದ ಸಂಚಾಲಕ ಬಿ.ವೈ.ವಿಜಯೇಂದ್ರ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತ ವಿವೇಕಾನಂದ, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರುಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಿದರು.
ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ನೀಡಿವೆ. ಬಜೆಟ್‍ನಲ್ಲಿ ಘೋಷಿಸಿರುವಂತೆ ಎಲ್ಲಾ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಅಪ್ಪರ್‍ಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವುದಕ್ಕಾಗಿ ಮುಂದಿನ ತಿಂಗಳು ದೇಶದ ಪ್ರಧಾನಿ ಮೋದಿರವರು ಚಿತ್ರದುರ್ಗಕ್ಕೆ ಬರುವ ಸಾಧ್ಯತೆಗಳಿವೆ. ಕೇಂದ್ರ ಗೃಹ ಮಂತ್ರಿ ಅಮಿತ್‍ಷಾ ಕೂಡ ರಾಜ್ಯಕ್ಕೆ ಬರಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾ.ನಲ್ಲಿ ಚಿತ್ರದುರ್ಗಕ್ಕೆ ಬರಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ಪಡೆದಿರುವ ಮಹಿಳಾ ಫಲಾನುಭವಿಗಳನ್ನು ಅಂದು ಕರೆಸಲಾಗುವುದೆಂದರು.
ಬಿಜೆಪಿ.ಜಿಲ್ಲಾ ಉಪಾಧ್ಯಕ್ಷೆ ಚಂದ್ರಿಕಾ ಲೋಕನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಡಾ.ಸಿದ್ದಾರ್ಥ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶೈಲಜಾರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತಮ್ಮ, ನಗರಾಧ್ಯಕ್ಷೆ ಶೀಲ ಶ್ರೀನಿವಾಸ್, ನಗರ ಪ್ರಧಾನ ಕಾರ್ಯದರ್ಶಿ ಅರುಣ, ನಗರಸಭಾ ಸದಸ್ಯೆ ತಾರಕೇಶ್ವರಿ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯೆ ಎ.ರೇಖ, ವಕ್ತಾರ ನಾಗರಾಜ್‍ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

[t4b-ticker]

You May Also Like

More From Author

+ There are no comments

Add yours