ಚಿತ್ರದುರ್ಗ ದಾವಣಗೆರೆ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ

 

chitradurga:ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು (Maize)ನೇರವಾಗಿ ಪ್ರತಿ ಕ್ವಿಂಟಾಲ್‍ಗೆ ರೂ.2250/- ಬೆಲೆಯಲ್ಲಿ ಖರೀದಿಸಲು ಕ್ರಮಕೈಗೊಂಡಿದೆ.

ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆ.ಜಿ. ಪ್ರಮಾಣದಷ್ಟು ಮೆಕ್ಕೆಜೋಳದ ಮಾದರಿ ನೀಡಿ, ಪ್ರೂಟ್ಸ್ ತಂತ್ರಾಂಶದಲ್ಲಿ ನೊಂದಾವಣೆಯಾಗಿರುವ ಸಂಖ್ಯೆಯೊಂದಿಗೆ ನೊಂದಾಯಿಸಿಕೊಳ್ಳಬಹುದಾಗಿದೆ.
ಇದನ್ನೂ ಓದಿ: ಮದುವೆಯಾಗಿ ನಾಲ್ಕೇ ದಿನಕ್ಕೆ ರಕ್ಷಣೆ ಕೋರಿ SP ಕಚೇರಿಗೆ ಆಗಮಿಸಿದ ನವಜೋಡಿ

ನೊಂದಣೆ ಪ್ರಕ್ರಿಯೆಯು ಈಗಾಗಲೇ ನ.13 ರಿಂದ ಪ್ರಾರಂಭವಾಗಿದ್ದು, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ರೈತರಿಗೆ ಸಾಗಾಣಿಕಾ ವೆಚ್ಚದ ಹೊರೆಯನ್ನು ತಗ್ಗಿಸುವ ಸಲುವಾಗಿ, ಮಹಾಮಂಡಳವು ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆದಿರುತ್ತದೆ.
ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವ ಕ್ಷೀರಸಿರಿ ಮತ್ತು ಸರಕಾರದ ಕೃಷಿ ಇಲಾಖೆ ಸಿದ್ಧಪಡಿಸಿರುವ  ತಂತ್ರಾಂಶದ ಮೂಲಕ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಅನುμÁ್ಠನಕ್ಕೆ ತರುತ್ತಿದೆ.  ಪ್ರತಿ ಒಬ್ಬ ರೈತರಿಂದ ಗರಿಷ್ಠ 1000 ಕ್ವಿಂಟಾಲ್ ಮೆಕ್ಕೆಜೋಳ ಸರಬರಾಜಿಗೆ ಸೀಮಿತಗೊಳಿಸಿದ್ದು, ದಾವಣಗೆರೆ ಜಿಲ್ಲೆಗೆ ಸಂಬಂಧಿಸಿದಂತೆ, ಹೆಚ್ಚಿನ ಮಾಹಿತಿಗಾಗಿ ಆಸಕ್ತ ರೈತರು ಡಾ. ಎಸ್.ಎಂ.ಮೂರ್ತಿ, ವ್ಯವಸ್ಥಾಪಕರು (ಶೇಮತಾಂ) -7760980540 ಇವರನ್ನು ಹಾಗೂ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಗೆ ಸಂಬಂಧಪಟ್ಟಂತೆ ಡಾ.ಸಂಜಯ್.ಕೆ.ಪಿ (ಉಪ ವ್ಯವಸ್ಥಾಪಕರು, ಶೇಖರಣೆ) 8971435116 ಇವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ  ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಪ್ರಕಟಣೆ ತಿಳಿಸಿದೆ.

[t4b-ticker]

You May Also Like

More From Author

+ There are no comments

Add yours