ಮಂಗಳೂರು, ನ.18: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆಸಿರುವ ರಾಜ್ಯ ಸರ್ಕಾರ, ಬರೋಬ್ಬರಿ 31 ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.




ಕರಾವಳಿ ಭಾಗದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಸ್ಥಳ ನಿರೀಕ್ಷಣೆಯಲ್ಲಿದ್ದ ಎನ್. ಶಶಿಕುಮಾರ್ ಅವರನ್ನು ಮಂಗಳೂರಿನ ಪಶ್ಚಿಮ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ (ಐಜಿಪಿ) ನೇಮಿಸಲಾಗಿದೆ. ಇವರು ಈ ಹಿಂದೆ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ (ಎಡಿಜಿಪಿ) ಆರ್. ಹಿತೇಂದ್ರ ಅವರನ್ನು ಬೆಂಗಳೂರು ನಗರದ ನೂತನ ಮುಖ್ಯ ಪೊಲೀಸ್ ಆಯುಕ್ತರಾಗಿ ನೇಮಿಸಲಾಗಿದೆ.

ನಿರ್ಗಮಿತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
