ಮಾಣಿಲ: ಬಂಟ್ವಾಳ ತಾಲೂಕಿನ ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಕೃಪಾಶೀರ್ವಾದದೊಂದಿಗೆ ಜು. 12ರಿಂದ ಆ. 28ರವರೆಗೆ 48 ದಿನಗಳ ಕಾಲ ನಡೆಯಲಿರುವ ಸಾಮೂಹಿಕ ಶ್ರೀ ಲಕ್ಷ್ಮೀಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಜೂ. 28ರಂದು ಬೆಳಿಗ್ಗೆ 10-00 ಗಂಟೆಯಿಂದ ಮಾಣಿಲ ಶ್ರೀಧಾಮದಲ್ಲಿ ನಡೆಯಲಿದೆ.
ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದೀಪ ಪ್ರಜ್ವಲನೆ ಮಾಡಲಿದ್ದು, ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಸಮಿತಿ ಅಧ್ಯಕ್ಷರಾದ ಡಾ. ಹರೀಶ್ ಬೊಟ್ಟಾರಿ ಚೇವಾರು ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಯಮಿ ಗೋಪಾಲಕೃಷ್ಣ ಪೈ, ನಿವೃತ್ತ ಬಿಎಸ್ಎಫ್ ವಿಂಗ್ ಕಮಾಂಡೆಂಟ್ ಡಿ. ಚಂದಪ್ಪ ಮೂಲ್ಯ, ಮಂಗಳೂರು ಕ್ಯಾಂಪ್ಕೋ ಲಿ.ನ ನಿರ್ದೇಶಕ ಸತೀಶ್ಚಂದ್ರ ಭಂಡಾರಿ ಕೊಳಾರು, ಮೆಸ್ಕಾಂ ಸಹಾಯಕ ಇಂಜಿನಿಯರ್ ಸಚ್ಚಿದಾನಂದ ಸಾಲಿಯಾನ್, ಬಿಸಿರೋಡ್ನ ಉದ್ಯಮಿ ಬಿ. ಸಂಜೀವ ಪೂಜಾರಿ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಮಿತಿಯ ಕಾರ್ಯಾಧ್ಯಕ್ಷರುಗಳಾದ ಡಾ. ಸತೀಶ್ ಪುಣೆಂಚತಾಯ, ಉದಯ ಕುಮಾರ್ ಬಂದಾರು ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರೇವತಿ ಪೆರ್ನೆ ತಿಳಿಸಿದ್ದಾರೆ.



