ಚಿಕ್ಕಬಳ್ಳಾಪುರ ಜಿಲ್ಲೆಯ ಗುಂಡ್ಲುಗುರ್ಕಿ ಗ್ರಾಮದಲ್ಲಿ ವ್ಯಕ್ತಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನ ಸೃಷ್ಟಿಸಿದೆ. ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಪತ್ನಿಯೇ ಕೊಲೆ ಮಾಡಿದ್ದಾಳೋ ಎಂಬ ಅನುಮಾನಗಳಿವೆ. ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.





