ವೇಣೂರು: ಬೆಳ್ತಂಗಡಿ ತಾಲೂಕಿನ ಮರೋಡಿ ಪೊಸರಡ್ಕ ಶ್ರೀ ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮಬೈದರ್ಕಳ ಗರಡಿಯಲ್ಲಿ ಎ. 28ರಿಂದ ನಡೆಯಲಿರುವ ಪುನರ್ ಪ್ರತಿಷ್ಠಾ ಬ್ರಹ್ಮಕುಂಭಾಭಿಷೇಕದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಇಂದು ಹೊರೆಕಾಣಿಕೆ ಸಮರ್ಪಿಸಲಾಗಿದೆ.
20 ಕ್ವಿಂಟಾಲ್ ಬೆಳ್ತಿಗೆ ಅಕ್ಕಿ, ಒಂದು ಕ್ವಿಂಟಾಲ್ ಬೆಲ್ಲ, ಸಕ್ಕರೆ ಸೇರಿದಂತೆ 7೭ ಕ್ವಿಂಟಾಲ್ ವಿವಿಧ ತರಕಾರಿಗಳನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸೂಚನೆಯಂತೆ ಶ್ರೀ ಕ್ಷೇತ್ರ ಪೊಸರಡ್ಕಕ್ಕೆ ಸಾಗಿಸಲಾಯಿತು.





