ವೇಣೂರು: ಬೆಳ್ತಂಗಡಿ ತಾಲೂಕಿನ ವೇಣೂರು ಸನಿಹದ ನಿಟ್ಟಡೆ ಕುಂಭಶ್ರೀ ಆಂಗ್ಲಮಾಧ್ಯಮ ವಸತಿ ಶಾಲೆಯಲ್ಲಿ ಜ. 6ರಂದು ಸಂಸ್ಥಾಪಕರ ದಿನ ಹಾಗೂ ಮಾತಾ-ಪಿತಾ ಗುರುದೇವೋಭವ ಎಂಬ ಹೃದಯಸ್ಪರ್ಶಿ ಕಾರ್ಯಕ್ರಮವು ಜರಗಲಿದೆ.

ಬೆಳಿಗ್ಗೆ 9-30ರಿಂದ ಸಂಸ್ಥಾಪಕ ದಿನಾಚರಣೆ ನಡೆಯಲಿದ್ದು, ಅಪರಾಹ್ನ 2-30ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬಳಿಕ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಉದ್ಘಾಟಿಸಲಿದ್ದಾರೆ. ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಗಿರೀಶ್ ಕೆ.ಎಚ್. ಅವರು ಅಧ್ಯಕ್ಷತೆ ವಹಿಸಲಿದ್ದು, ಹಲವು ಅತಿಥಿ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆಯ ಸಂಚಾಲಕರಾದ ಅಶ್ವಿತ್ ಕುಲಾಲ್ ತಿಳಿಸಿದ್ದಾರೆ.





