ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆಯಾದ್ಯಂತ ನಾಳೆ (ಮೇ 11) ರಜೆ ಘೋಷಿಸಲಾಗಿದೆ. ರಾಜ್ಯಾದ್ಯಂತ 3 ದಿನ ಶೋಕಾಚರಣೆ ನಡೆಯಲಿದ್ದು, ಚಳ್ಳಕೆರೆಯಲ್ಲಿ ಸಚಿವರ ಅಂತ್ಯಕ್ರಿಯೆ ನಡೆಯಲಿದೆ.
ಸಚಿವ ಡಿ. ಸುಧಾಕರ್ ವಿಧಿವಶ: ಚಿತ್ರದುರ್ಗದಲ್ಲಿ ನಾಳೆ ಸಾರ್ವಜನಿಕ ರಜೆ; ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ





