ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ: ಸಚಿವ ಶ್ರೀರಾಮುಲು

 

 

 

 

ಚಿತ್ರದುರ್ಗ ಮಾ. ೧೩
ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡುವುದಾಗಿ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀರಾಮುಲು ತಿಳಿಸಿದರು.

ತಾಲ್ಲೂಕಿನ ದೂಡ್ಡಸಿದ್ದವ್ವನಹಳ್ಳಿಯಲ್ಲಿ ಸುಮಾರು ೧ ಕೋಟಿ ರೂ ವೆಚ್ಚದಲ್ಲಿ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಳ್ಳಲಾದ ಚರ್ಮ ಶಿಲ್ಪಿ ಭವನ ನಿರ್ಮಾಣದ ಗುದ್ದಲಿ ಪೂಜೆ ಮತ್ತು ಕುಶಲಕರ್ಮಿಗಳಿಗೆ ಕೌಶಲ್ಯ ಅಭಿವೃದ್ಧಿ ಮತ್ತು ಆದಾಯ ಗಳಿಕೆಗಾಗಿ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

 

 

ಈ ಭಾಗದಲ್ಲಿ ಈ ರೀತಿಯಾದ ಚರ್ಮ ನಿಗಮದ ಕರಕುಶಲದ ತರಬೇತಿ ನೀಡುವುದರ ಮೂಲಕ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ್ಯವನ್ನು ಮಾಡಲು ಸಹಾಯವಾಗುತ್ತದೆ. ಇದಕ್ಕೆ ಈ ಭಾಗದ ಸಂಸದರು, ಶಾಸಕರು ನೆರವನ್ನು ನೀಡಿದ್ದಾರೆ ಎಂದ ಸಚಿವರು, ನಿಗಮದ ಅಧ್ಯಕ್ಷರಾದ ಲಿಂಗಣ್ಣನವರು, ರಾಜ್ಯದಲ್ಲಿ ಉತ್ತಮವಾದ ಕೆಲಸವಾಗಬೇಕೆಂದು ಅಧ್ಯಕ್ಷರು ರಾಜ್ಯ ಪ್ರವಾಸ ಮಾಡುವುದರ ಮೂಲಕ ಸ್ಥಳಗಳನ್ನು ಗುರುತಿಸುತಿದ್ದಾರೆ. ಅದನ್ನು ಸ್ಥಾಪನೆ ಮಾಡುವ ಕಾರ್ಯವನ್ನು ಸಹಾ ಮಾಡಲಾಗುತ್ತಿದೆ ಇದರೊಂದಿಗೆ ಚರ್ಮ ಉದ್ಯಮಕ್ಕೆ ತನ್ನದೆ ಆದ ಬೇಡಿಕೆ ಇದರ ಇದರ ಉತ್ಪನ್ನಗಳ ಬಗ್ಗೆ ಸಂಶೋಧನೆ ಮಾಡುವ ಬಗ್ಗೆ ಕೇಂದ್ರವನ್ನು ಸ್ಥಾಪನೆ ಮಾಡುವ ಕಾರ್ಯವೂ ಸಹಾ ಚಿತ್ರದುರ್ಗ ನಗರದಲ್ಲಿ ನಡೆಯುತ್ತಿದೆ ಇದಕ್ಕೆ ಸಂಬಂಧಪಟ್ಟ ೨೦ ಕೋಟಿ ರೂ.ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಇದರಲ್ಲಿ ತರಬೇತಿಯನ್ನು ನೀಡುವುದು ಮಾತ್ರವಲ್ಲದೆ ಆಧುನಿಕ ಕಾಲಕ್ಕೆ ತಕ್ಕಂತೆ ಚರ್ಮದ ಉಪ ಉತ್ಪನ್ನಗಳ ತಯಾರಿಯ ಬಗ್ಗೆ ಮಾಹಿತಿ ನೀಡಲಾಗುವುದು ಇದರಲ್ಲಿ ಕೇಂದ್ರ ಸರ್ಕಾರದ ಸಹಾಯವು ಸಹಾ ಇದೆ ಎಂದು ಸಚಿವರು ತಿಳಿಸಿ ಚಿತ್ರದುರ್ಗ ನಗರದಲ್ಲಿ ಅತಿ ಮುಖ್ಯವಾದ ಬೇಡಿಕೆಯಾದ ಮೆಡಿಕಲ್ ಕಾಲೇಜು ಸ್ಥಾಪನೆಯ ಬಗ್ಗೆ ಮುಖ್ಯಮಂತ್ರಿಗಳು ಇತ್ತಿಚಿನ ಆಯವ್ಯಯದಲ್ಲಿ ಸಾರ್ವಜನಿಕ ಸಹಭಾಗಿತ್ವದಿಂದ ನಿರ್ಮಾಣ ಮಾಡಲಾಗುತ್ತದೆ ಎಂದಿದ್ಧಾರೆ, ಇದರ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡುವುದಾಗಿ ಸಚಿವ ಶ್ರೀರಾಮುಲು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಸಂಸದ ಎ.ನಾರಾಯಣಸ್ವಾಮಿ, ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರೊ.ಎನ್.ಲಿಂಗಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ, ಮಾಜಿ ಅಧ್ಯಕ್ಷರು, ಸದಸ್ಯರಾದ ಶ್ರೀಮತಿ ಸೌಭಾಗ್ಯ, ಸ್ಥಾಯಿ ಸಮಿತಿ ಅಧ್ಯಕ್ಷರಾದ ನರಸಿಂಹರಾಜು, ತಾ.ಪಂ.ಅಧ್ಯಕ್ಷ ಲಿಂಗರಾಜು, ಸದಸ್ಯರಾದ ನಿಂಗಜ್ಜಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸತೀಶ್ ಬಾಬು, ಕೃಷ್ಣಪ್ಪ, ಗೋಪಾಲಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

[t4b-ticker]

You May Also Like

More From Author

+ There are no comments

Add yours