ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ  ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದು:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 25:
ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ  ಯುವಜನತೆಯ ಪಾತ್ರ ಅತ್ಯಂತ ಮಹತ್ವವಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರ ನಡೆದ ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಬಳ್ಳಾರಿ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಛಾಯಾಚಿತ್ರ ಪ್ರದರ್ಶನ ಹಾಗೂ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ 20, 30 ವರ್ಷಗಳ ಹಿಂದೆ ನಮ್ಮ ದೇಶವನ್ನು ಕೆಳಮಟ್ಟದಲ್ಲಿ ನೋಡುವ ಪದ್ಧತಿ ಇತ್ತು. ಆದರೆ ಈಗ ಹೊರ ದೇಶಗಳು ಗೌರವ ಕೊಡುವಷ್ಟರ ಮಟ್ಟಿಗೆ ನಮ್ಮ ದೇಶ ಬೆಳೆದು ನಿಂತಿದೆ. ನಮ್ಮ ದೇಶವು ಬೇರೆ ದೇಶಗಳಿಂದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿದ್ದೇವು. ಆದರೆ ಈಗ ನಾವೇ ಬೇರೆ ದೇಶಗಳಿಗೆ ವಸ್ತುಗಳನ್ನು ರಪ್ತು ಮಾಡುತ್ತಿದ್ದೇವೆ. ಅಷ್ಟರ ಮಟ್ಟಿಗೆ ನಮ್ಮ ದೇಶ ಸ್ವಾಲಂಬಿಯಾಗಿ ಬೆಳೆದು ನಿಂತಿದೆ. ಕಳೆದ ಏಳೆಂಟು ವರ್ಷಗಳಲ್ಲಿ ಕೇಂದ್ರ ಸರ್ಕಾರದಲ್ಲಿ ಅಂಗವಿಕಲರ ವೇತನ ವಿಧವಾ ವೇತನ, ವೃದ್ಧಾಪ್ಯ ವೇತನ ಎಲ್ಲವೂ ನೇರವಾಗಿ ಅವರ ಅಕೌಂಟ್‍ಗೆ ಜಮೆಯಾಗುತ್ತಿದೆ. ಉನ್ನತ  ವ್ಯಾಸಂಗಕ್ಕಾಗಿ ವಿದೇಶದಲ್ಲಿ ಓದುವ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದರು.
ಕೊರೊನಾ ಸಂಕಷ್ಟದಲ್ಲಿ ಭಾರತದ ಜನತೆಗೆ ಉಚಿತವಾಗಿ ಲಸಿಕೆ ನೀಡಿದ ಕೀರ್ತೀ ಭಾರತಕ್ಕೆ ಸಲ್ಲುತ್ತದೆ. ಹೊರದೇಶಗಳಿಗೂ ಕೂಡ ವ್ಯಾಕ್ಸಿನ್‍ಗಳನ್ನು ನೀಡಲಾಗಿದೆ. ಅಷ್ಟರ ಮಟ್ಟಿಗೆ ಭಾರತ ದೇಶವೂ ಅಂತರರಾಷ್ಟ್ರೀಯ ದೇಶಗಳ ಸಂಪರ್ಕ ಹೊಂದಿದೆ. ಉಕ್ರೇನ್ ಮತ್ತು ರಷ್ಯಾ ಯುದ್ಧದ ಸಂದರ್ಭದಲ್ಲಿ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತಂದ ಕೀರ್ತಿ  ದೇಶಕ್ಕೆ ಸಲ್ಲುತ್ತದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಯೋಜನೆಗಳಾದ ಮೇಕ್ ಇನ್ ಇಂಡಿಯಾ, ಆತ್ಮ ನಿರ್ಭರ ಭಾರತ ಯೋಜನೆ,  ಪ್ರಧಾನ್ ಮಂತ್ರಿ ಆವಾಸ್ ಯೋಜನೆ, ಜನ್‍ಧನ್ ಯೋಜನೆ, ಪಿಎಂ ಕಿಸಾನ್ ಯೋಜನೆ, ಬಿಮಾ ಮತ್ತು ಪಿಂಚಣಿ ಯೋಜನೆ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಹೀಗೆ ಅನೇಕ ಯೋಜನೆಗಳನ್ನು ದೇಶದಲ್ಲಿ ಅಭಿವೃದ್ಧಿ ಪಡಿಸುವುದರ ಮೂಲಕ ಕೇಂದ್ರ ಸರ್ಕಾರ ಜನರಿಗೆ ನೆರವಾಗುತ್ತಿದೆ ಎಂದು ತಿಳಿಸಿದರು.
ಬಳ್ಳಾರಿಯ ಕೇಂದ್ರ ಸಂವಹನಾ ಇಲಾಖೆಯ ಉಪನಿರ್ದೇಶಕರಾದ ಡಾ.ಜಿ.ಡಿ.ಹಳ್ಳಿಕೇರಿ ಮಾತನಾಡಿ, ಕೇಂದ್ರ ಸರ್ಕಾರ ಜನರ ಅಭಿವೃದ್ಧಿಗಾಗಿ ಸಾಕಷು ಯೋಜನೆಗಳನ್ನು ಜಾರಿಗೊಳಿಸಿದೆ. ಅಂತಹ ಯೋಜನೆಗಳ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ಛಾಯಾಚಿತ್ರ ಪ್ರದರ್ಶನ ಮೂರು ದಿನಗಳ ಕಾಲ ನಡೆಯಲಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವುದರ ಮೂಲಕ ತಮ್ಮ ನೆರೆಹೊರೆಯರಿಗೆ ಈ ಛಾಯಾಚಿತ್ರ ಪ್ರದರ್ಶನಕ್ಕೆ ಕರೆತಂದು ಅದರ ಮಾಹಿತಿಯನ್ನು ತಿಳಿಸಬೇಕು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪ್ರತಿ ಹಳ್ಳಿ ಹಳ್ಳಿಗೂ ಭೇಟಿ ನೀಡಿ ಸ್ವಚ್ಛ ಭಾರತ ಅಭಿಯಾನ, ಭೇಟಿ ಬಚಾವೋ ಭೇಟಿ ಪಡವೋ ಹೀಗೆ ಅನೇಕ ಯೋಜನೆಗಳ ಬಗ್ಗೆ ಜನರಲ್ಲಿ ತಿಳುವಳಿಕೆ ನೀಡಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯರರಾದ ಡಾ.ಹೆಚ್.ಗುಡ್ಡದೇಶ್ವರಪ್ಪ ಮಾತನಾಡಿ  ಶಿಕ್ಷಕರು ಮಕ್ಕಳಿಗೆ ಬೋಧನೆ ಮಾಡುವುದರ ಜೊತೆಗೆ ಮಕ್ಕಳಿಗೆ ಜಾತ್ಯಾತೀತ ವ್ಯಕ್ತಿಗಳನ್ನಾಗಿ ಬದಲಾಯಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಈ ದೇಶವನ್ನು ಸಮೃದ್ಧವಾಗಿ ಕಟ್ಟುವ ಜವಾಬ್ದಾರಿ ನಿಮ್ಮ ಮೇಲಿದೆ. ನೀವ್ಯಾರು ಬೇರೆಯರ ಅನುಯಾಯಿಗಳಾಗಬೇಡಿ, ನಾಯಕರಾಗಿ ಹೊರಹೊಮ್ಮಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಅಗಸರ ಸುನೀತಾಗೆ (ಪ್ರಥಮ) ಹೇಮಾ.ಟಿ. (ದ್ವಿತೀಯ) ಸುಚಿತ್ರಾ ಆರ್ (ತೃತೀಯ) ಬಹುಮಾನ ಪಡೆದರು. ಪ್ರಬಂಧ ಸ್ಪರ್ಧೆಯಲ್ಲಿ ದೀಪಾ ಎಂ.ಎಸ್. (ಪ್ರಥಮ), ತೇಜಸ್ವಿನಿ.ಸಿ. (ದ್ವಿತೀಯ) ಸುಚಿತ್ರಾ.ಇ. (ತೃತೀಯ) ಬಹುಮಾನ ಪಡೆದರು. ಭಾಷಣ ಸ್ಪರ್ಧೆಯಲ್ಲಿ ಸಿಂಧೂ ಇ. (ಪ್ರಥಮ) ಸುಚಿತ್ರಾ ಆರ್. (ದ್ವಿತೀಯ), ಅಂಜಲಿ ಹೆಚ್.ಎಂ (ತೃತೀಯ) ಬಹುಮಾನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ.ರಂಗಪ್ಪ, ಐಕ್ಯೂಎಸಿ ಸಂಚಾಲಕರಾದ ಪ್ರೊ.ಸಿ.ಬಸವರಾಜ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ಬಿ.ಮಂಜುನಾಥ್, ಸಮಾಜಶಾಸ್ತ್ರದ ವಿಭಾಗದ ಮುಖ್ಯಸ್ಥರಾದ ಪ್ರೊ.ಡಿ.ಓ ಸಿದ್ದಪ್ಪ, ವಾಣಿಜ್ಯ ಶಾಸ್ತ್ರ ವಿಭಾಗದ ಶಕುಂತಲಾ ಹಾಗೂ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಇದ್ದರು.

[t4b-ticker]

You May Also Like

More From Author

+ There are no comments

Add yours