ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

 

ಚಳ್ಳಕೆರೆ: ನಗರದ ವೀರಭದ್ರಸ್ವಾಮಿ ದೇವಸ್ಥಾನದ ಬಳಿಯಲ್ಲಿ ಶನಿವಾರ ತಡರಾತ್ರಿ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ  (k.c.Virendra)ಅವರ ನಿವಾಸದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ ಘಟನೆ ನಡೆದಿದೆ.

ನಗರದ ಕಾಟಪ್ಪನಹಟ್ಟಿಯ ಎಂ. ತಿಪ್ಪೇಸ್ವಾಮಿ ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿ. ಸದ್ಯ ಅವರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:ಚಿತ್ರದುರ್ಗದ ಇಬ್ಬರು ಅಧಿಕಾರಿಗಳ ಮೇಲೆ ಲೋಕಯುಕ್ತ ರೈಡ್

‘ಗ್ರಾಮದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಟಗರಿನ ಕಾಳಗಕ್ಕೆ ಪೊಲೀಸರು ತಡೆಯೊಡ್ಡಿದ್ದು, ಶಾಸಕರ ಬಳಿ ಚರ್ಚಿಸಲು ಬಂದಿದ್ದೇವೆ ಎಂದು ಚಿತ್ರದುರ್ಗ ತಾಲ್ಲೂಕಿನ ಬಚ್ಚಬೋರನಹಟ್ಟಿ ಹಾಗೂ ಕಲ್ಲೆನಹಳ್ಳಿ ಗ್ರಾಮಸ್ಥರು ಮನೆಯ ಗೇಟ್ ಒಳಗೆ ನುಗ್ಗಲು ಯತ್ನಿಸಿದಾಗ ತಡೆದ ಕಾರಣ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ’ ಎಂದು ತಿಪ್ಪೇಸ್ವಾಮಿ ದೂರು ನೀಡಿದ್ದಾರೆ.

ಆರೋಪಿಗಳಾದ ಅವಿನಾಶ್, ಕುಮಾರ್, ರವಿ, ಪ್ರದೀಪ್, ಶಶಿಕುಮಾರ್ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪಿಎಸ್ಐ ಮೂಷ್ಟೂರಪ್ಪ ತಿಳಿಸಿದ್ದಾರೆ.

ಪ್ರಕರಣ ನಿನ್ನೆ ರಾತ್ರಿ ಘಟನೆ ವಿವರ: 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ಮತ್ತು ಇತರರು ಎಂದು ಪ್ರಕರಣ ದಾಖಲು ಮಾಡಿ ನಿನ್ನೆ ರಾತ್ರಿ  ಬಂಧನ ಮಾಡಲಾಗಿತ್ತು. ಆದರೆ ರಾತ್ರಿಯೇ ಸ್ಟೇಷನ್ ಬೆಲ್‌ ನೀಡಿ ಬಿಡುಗಡೆಗೊಳಿಸಲಾಗಿದೆ‌ ಎಂದು ತಿಳಿದು ಬಂದಿದೆ.

 

[t4b-ticker]

You May Also Like

More From Author

+ There are no comments

Add yours