ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಅಡ್ಕ ನಿವಾಸಿ ಬಿಜೆಪಿ ಬೂತ್ ೧೮ರ ಕಾರ್ಯದರ್ಶಿ ರಮೇಶ್ ಗೌಡರವರು ತಾನು ಕೆಲಸ ಮಾಡುವ ಸಂದರ್ಭದಲ್ಲಿ ಬಿದ್ದು ಗಾಯಗೊಂಡಿದ್ದು, ಅವರ ಮನೆಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಆರೋಗ್ಯ ಕ್ಷೇಮ ವಿಚಾರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಪಾರೆಂಕಿ, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಲವಂತಿಗೆ ಶಕ್ತಿಕೇಂದ್ರ ಅಧ್ಯಕ್ಷರಾದ ಮದುಸೂಧನ್, ಮಿತ್ತಬಾಗಿಲು ಶಕ್ತಿಕೇಂದ್ರ ಅಧ್ಯಕ್ಷರಾದ ಸಚಿನ್ ಗೌಡ ಜೊತೆಗಿದ್ದರು.









