ತುರುವನೂರಿನಲ್ಲಿ ಗೋಶಾಲೆ ಉದ್ಘಾಟಿಸಿದ ಶಾಸಕ ಟಿ.ರಘುಮೂರ್ತಿ

 

ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಪರವಾಗಿವೆ- ಟಿ. ರಘುಮೂರ್ತಿ
*****************
ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.02:
ನಮ್ಮ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಇವೆಲ್ಲವೂ ಜನಪರವಾದ ಯೋಜನೆಗಳಾಗಿವೆ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು.
ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತ್, ತಾಲ್ಲೂಕು ಮಟ್ಟದ ಗ್ಯಾರೆಂಟಿ  ಯೋಜನೆಗಳ ಅನುಷ್ಟಾನ ಸಮಿತಿ ಸಹಯೋಗದೊಂದಿಗೆ ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ತುರುವನೂರು ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಗ್ಯಾರೆಂಟಿ ಯೋಜನೆಗಳ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ನಾವು ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಹೀಗೆ 05 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಜನರಿಗೆ ತಲುಪಿಸಿದ್ದೇವೆ.  ಪ್ರಸ್ತುತ ಬರ ಪರಿಸ್ಥಿತಿ ಇರುವುದರಿಂದ ಜಾನುವಾರುಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಇಂದು ಗೋಶಾಲೆಯನ್ನು ಪ್ರಾರಂಭಿಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ತಹಸಿಲ್ದಾರ್ ಡಾ. ನಾಗವೇಣಿ, ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಸುಧಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೀಪಾ ಮಹೇಶ್, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಸದಸ್ಯರುಗಳು, ಮುಖಂಡರುಗಳಾದ ಸಂತೋಷ, ಕಾಕಿ ಹನುಮಂತರೆಡ್ಡಿ, ವೀವೇಕಪ್ಪ, ನಾಗರಾಜ್, ಪವನ್ ಕುಮಾರ್, ಡಿ.ಆರ್.ಮಂಜುನಾಥ್, ಮುಖಂಡರು, ಸಾರ್ವಜನಿಕರು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
[t4b-ticker]

You May Also Like

More From Author

+ There are no comments

Add yours