ಚಳ್ಳಕೆರೆಯಲ್ಲಿ ಹೊಸ ದಾಖಲೆ ಬರೆದ ಶಾಸಕ ಟಿ.ರಘುಮೂರ್ತಿ

 

ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಸತತ ಮೂರು ಬಾರಿ ಜನಭೇರಿ ಬಾರಿಸುವ ಮೂಲಕ ಕ್ಷೇತ್ರದಲ್ಲಿ ಇತಿಹಾಸ ಸೃಷ್ಠಿಸಿದ ಶಾಸಕ ಟಿ.ರಘುಮೂರ್ತಿಯವರು ಹೊಸ ದಾಖಲೆ ಬರೆದಿದ್ದಾರೆ.
16126ಮತಗಳ ಅಂತರದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ರವೀಶ್ ಕುಮಾರ್ ರವರನ್ನು ಸೋಲಿಸುವ ಮೂಲಕ ಮೂರಿ ಭಾರಿಯೂ ಕ್ಷೇತ್ರದಲ್ಲಿ ನಾನೇ ಎಂಎಲ್ಎ ಎಂಬ ಸಂದೇಶವನ್ನು ಸಾರಿದ್ದಾರೆ.

ಚಳ್ಳಕೆರೆ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಟಿ. ರಘುಮೂರ್ತಿ 67,363 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ. ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಪಡೆದ ಮತಗಳು 51,236 ಮತ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ.ಟಿ. ಕುಮಾರಸ್ವಾಮಿ 28928ಮತಗಳನ್ನು ಗಳಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಅನಿಲ್‌ಕುಮಾರ್ 22,732 ಮತ ಪಡೆದು ಡಬಲ್ ಇಂಜಿನ್ ಸರಕಾರದ ಅಭ್ಯರ್ಥಿ ನಾಲ್ಕನೇ ಸ್ಥಾನ ಪಡೆದು ಸೋಲು ಕಂಡಿದ್ದಾರೆ.

ನಾನು ಮಾಡಿದ ಅಭಿವೃದ್ಧಿ ಕಾರ್ಯಗಳೇ ನನ್ನ ಗೆಲುವಿಗೆ ಕಾರಣ ಎಂಬುದು ಶಾಸಕರ ಮಾತು. ವಿರೋಧ ಪಕ್ಷದ ಅಭ್ಯರ್ಥಿಗಳು, ಕೆಲ‌ ನಾಯಕರು ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಿದರೂ ಮತದಾರ ಮಾತ ನಾನು ಮಾಡಿದ ಅಭಿವೃದ್ಧಿಯನ್ನು ಮಾತ್ರ ಮನದಲ್ಲಿ ಇಟ್ಟುಕೊಂಡು ಮತ ನೀಡಿದ್ದಾರೆ. ಜಿಲ್ಲೆಯಲ್ಲೇ ಮೂರು ಭಾರಿ ಸತತ ಜಯಕಂಡ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾದ ರಘುಮೂರ್ತಿಯವರಿಗೆ ಯಾರೂ ಎದುರಾಳಿ ಇಲ್ಲ ಎಂಬುವುದು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.

[t4b-ticker]

You May Also Like

More From Author

+ There are no comments

Add yours