





ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಹೀಗಾಗಿ ಮಲೆನಾಡು ಭಾಗದ ಕಾಡಂಚಿನ ಗ್ರಾಮದ ಜನರಲ್ಲಿ ಆತಂಕ ಶುರುವಾಗಿದೆ. ಈ ಬಾರಿ ಅವಧಿಗೂ ಮುನ್ನವೇ ಕೆಎಫ್ಡಿ ಕೇಸ್ಗಳ ಸಂಖ್ಯೆ 8ಕ್ಕೆ ಏರಿಕೆಯಾಗಿರುವುದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಸದ್ಯ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ.