ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ , ಪ್ರಧಾನ ಕಾರ್ಯದರ್ಶಿಯಾಗಿ ಜೈಸನ್ ತಾಕೋಡೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಇದರ ಅಧಿಕೃತ ಸಂಯೋಜನೆಗೆ ಒಳಪಡುತ್ತಿರುವ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಬುಧವಾರ ಇಲ್ಲಿನ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.
ಜಿಲ್ಲಾ ಸಂಘದ ಪ್ರತಿನಿಧಿಗಳಾದ ರಾಜೇಶ್ ಶೆಟ್ಟಿ ಚುನಾವಣಾ ಅಧಿಕಾರಿಯಾಗಿ ಹಾಗೂ ಕಿರಣ್ ಸಿರ್ಸಿಕರ್ ಸಹಾಯಕ ಚುನಾವಣಾ ಅಧಿಕಾರಿಯಾಗಿ ಭಾಗವಹಿಸಿದರು. ಎಲ್ಲ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆಯಿತು. ಗಣೇಶ್ ಕಾಮತ್ ಎಂ. ಉಪಾಧ್ಯಕ್ಷ , ಶರತ್ ದೇವಾಡಿಗ ಕಾರ್ಯದರ್ಶಿ, ರಾಘವೇಂದ್ರ ಶೆಟ್ಟಿ ಕೋಶಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.






