ಸಂಸದರ ಆದರ್ಶ ಗ್ರಾಮ ಅಭಿವೃದ್ಧಿಗೆ ಸಂಯೋಜಿತ ಕ್ರಿಯಾ ಯೋಜನೆ: ಕೇಂದ್ರ ಸಚಿವ ನಾರಾಯಣ ಸ್ವಾಮಿ

 

ಚಿತ್ರದುರ್ಗ(ಕರ್ನಾಟಕ ವಾರ್ತೆ).ನ.03:
ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾದ ಗ್ರಾಮಗಳ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಸಂಯೋಜಿತ ಕ್ರಿಯಾಯೋಜನೆ ತಯಾರಿಸಿ, ಶೀಘ್ರವಾಗಿ ಗ್ರಾಮಗಳಲ್ಲಿ ಅಗತ್ಯ ಇರುವ ಅಂಬೇಡ್ಕರ್ ಭವನ ಹಾಗೂ ಮನೆಗಳ ನಿರ್ಮಾಣ ಪಟ್ಟಿಯನ್ನು ನೀಡುವಂತೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೊಸದುರ್ಗ ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಕೇಂದ್ರ ಸರ್ಕಾರ ಪುರಸ್ಕøತ ಯೋಜನೆಗಳ ಕುರಿತು ಜರುಗಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಹೊಸದುರ್ಗ ತಾಲೂಕಿನಲ್ಲಿ ಗುಡಿಸಲುಗಳ ಪಟ್ಟಿಯನ್ನು ತಯಾರಿಸಿ. ವಸತಿ ಸಚಿವರ ವಿವೇಚನಾ ಕೋಟಾದಡಿ ಪಕ್ಕಾ ಮನೆಗಳನ್ನು ನಿರ್ಮಿಸಲು ಅನುದಾನ ನೀಡಲಾಗುವುದು. ಸಂಸದರ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದರು.
ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಯೋಜನೆಯ ರೂ.6 ಕೋಟಿ ಅನುದಾನವನ್ನು ವಿವಿಧ ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಬಳಕೆ ಮಾಡಿರುವುದಕ್ಕೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನವನ್ನು ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರು ವಾಸಿಸುವ ಪ್ರದೇಶದ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಳಕೆ ಮಾಡಬೇಕು ಎಂದರು.
ತ್ವರಿತವಾಗಿ ಭದ್ರಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಜರುಗಬೇಕು. ಹನಿ ನೀರಾವರಿ ಯೋಜನೆ ಅನುμÁ್ಠನಕ್ಕೆ ಗೊಳಿಸುತ್ತಿರುವ ಪ್ರದೇಶದಲ್ಲಿ ರೈತರ ಅಭಿಪ್ರಾಯ ಸಂಗ್ರಹಿಸಿ. ರೈತರಿಗೆ ಅಗತ್ಯ ಇರುವ ಮಾದರಿಯಲ್ಲಿ ಯೋಜನೆ ರೂಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಂಸದರ ನಿಧಿಯಡಿ ವಿವಿಧ ಗ್ರಾಮಗಳಲ್ಲಿ ನಿರ್ಮಿಸುತ್ತಿರುವ ಶಾಲಾ ಕೊಠಡಿ, ಸಮುದಾಯ ಭವನಗಳ ಕಾಮಗಾರಿಯನ್ನು ಚುರುಕುಗೊಳಿಸಬೇಕು. ಯೋಜನೆಗಳನ್ನು ಅನುμÁ್ಠನಗೊಳಿಸುತ್ತಿರುವ ನಿರ್ಮಿತಿ ಕೇಂದ್ರ ಹಾಗೂ ಪಂಚಾಯತ್ ರಾಜ್ಯ ಇಂಜಿನಿಯರಿಂಗ್ ವಿಭಾಗಗಳು ಕಾಮಗಾರಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದರು.
ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆ ಜಲ ಜೀವನ್ ಮಿಷನ್ ಅಡಿ ಪ್ರತಿ ಗ್ರಾಮದ ಮನೆಗಳಿಗೂ ನಳದ ಸಂಪರ್ಕ ನೀಡಲಾಗುತ್ತಿದೆ. ನಳ ಸಂಪರ್ಕದ ಜೊತೆಗೆ ಇಂಗು ಗುಂಡಿ ನಿರ್ಮಾಣ ಮಾಡಿ, ಮನೆಗಳಲ್ಲಿ ಬಳಕೆ ಮಾಡಿ ಹೊರ ಬಿಡುವ ಬೂದು ನೀರನ್ನು ಭೂಮಿಗೆ ಸೇರಿಸುವ ಕೆಲಸವಾಗಬೇಕು. ಇಂಗುಗುಂಡಿ ನಿರ್ಮಾಣಕ್ಕೆ ನರೇಗಾ ಅಥವಾ ಇನ್ನಿತರ ಯೋಜನೆಯಲ್ಲಿ ಅನುದಾನ ಒದಗಿಸಿ, ಜಲ ಜೀವನ್ ಮಿಷನ್ ಕಾಮಗಾರಿ ಅನಷ್ಟಾನಗೊಳಿಸಿ  ಎಂದರು.
ಹೊಸದುರ್ಗ ರೋಡ್ ರೈಲು ನಿಲ್ದಾಣ ಹಾಗೂ ರೈಲ್ವೇ ಮೇಲು ಸೇತುವೆ ಕಾಮಗಾರಿಗಳ ಪ್ರಗತಿಯನ್ನು ರೈಲ್ವೇ ಅಧಿಕಾರಿಗಳಿಂದ ಸಚಿವರು ಪಡೆದುಕೊಂಡರು.
ಸಭೆಯಲ್ಲಿ ತಹಶೀಲ್ದಾರ್ ಮಲ್ಲಿಕಾರ್ಜುನ, ಜಿ.ಪಂ ಯೋಜನಾ ನಿರ್ದೇಶಕ ಮಹಾಂತೇಶ್, ಹೊಸದುರ್ಗ ತಾ.ಪಂ. ಇಓ ವಿಶ್ವನಾಥ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಕೃಷಿ ಇಲಾಖೆ ಉಪನಿರ್ದೇಶಕ ಪ್ರಭಾಕರ್, ಭದ್ರಾ ಮೇಲ್ದಂಡೆ ಯೋಜನೆ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ, ನಿರ್ಮಿತಿ ಕೇಂದ್ರದ ಕೃಷ್ಣಗೌಡ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours