




ವೇಣೂರು: ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ಮೆರೆದ ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕು. ಸುಪ್ರಿಯಾ ಎಸ್. ಅವರಿಗೆ ಜಿಲ್ಲಾಮಟ್ಟದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ 50,000 ನಗದು ಬಹುಮಾನ ಮತ್ತು ಪ್ರಶಸ್ತಿ ನೀಡಿ ಗೌರವಿಸಲಾಯಿತು.