ಚಿತ್ರದುರ್ಗ: ಮಕ್ಕಳಿಗೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸ್ ಪ್ರಕರಣದಡಿ ಕಳೆದ ಒಂದು ವರ್ಷದಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಜಿಲ್ಲಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ.
ಸ್ವಾಮೀಜಿ ಮೂತ್ರ ಕೋಶದ ಸೋಂಕು ಹಾಗೂ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕಾರಾಗೃಹದ ಅಧಿಕಾರಿಗಳು ಜಿಲ್ಲಾ ಆಸ್ಪತ್ರೆಗೆ ಮಾಹಿತಿ ನೀಡಿದ್ದರು. ಈ ವೇಳೆ ವೈದ್ಯರು ಕಾರಾಗೃಹಕ್ಕೆ ತೆರಳಿ ಆರೋಗ್ಯ ಪರಿಶೀಲಿಸಿದ್ದರು.
ಮುರುಘಾ ಶರಣರಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದೆ. ಇವರಿಗೆ ಸ್ಕ್ಯಾನಿಂಗ್ ಹಾಗೂ ಹೆಚ್ಚಿನ ಚಿಕಿತ್ಸೆಗೆ ಕಾರಾಗೃರಹದಿಂದ ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿತ್ತು. ವೈದ್ಯರು ಚಿಕಿತ್ಸೆ ನೀಡಿದ ನಂತರ ಮರಳಿ ಕಾರಾಗೃಹಕ್ಕೆ ವಾಪಸ್ ತೆರಳಿದ್ದಾರೆ ಎಂದು ಜಿಲ್ಲಾ ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
[t4b-ticker]
+ There are no comments
Add yours