ಮುರುಘಾ ಶ್ರೀಗೆ ಮತ್ತೆ ಜೈಲೇ ಗತಿ ಜಾಮೀನು ಅರ್ಜಿ ವಜಾ

 

ಆಗಸ್ಟ್‌ 26 ಶುಕ್ರವಾರ ಮುರುಘಾಶ್ರೀಗಳ ವಿರುದ್ಧ ಮೈಸೂರಿನ ನಜರ್‌ಬಾದ್‌ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆ ನೆರವು ಪಡೆದು ಕೇಸ್ ದಾಖಲಿಸಿದ್ದರು. ಬಳಿಕ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆ ಆಗಿತ್ತು.

ಚಿತ್ರದುರ್ಗ: ಶಿವಮೂರ್ತಿ ಶರಣರ  (Murugha Mutt Shivamurthy Sharanara) ವಿರುದ್ಧ ದಾಖಲಾದ ಒಂದನೇ ಪೋಕ್ಸೋ ಪ್ರಕರಣ (POCSO Case) ಸಂಬಂಧ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ. ಒಂದನೇ ಪೋಕ್ಸೋ ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಚಾರ್ಜ್​ಶೀಟ್ ಸಲ್ಲಿಸಿದ ಬಳಿಕ ಜಾಮೀನು ಕೋರಿ ನ್ಯಾಯಾಲಯಕ್ಕೆ ಮುರುಘಾಶ್ರೀ ಅರ್ಜಿ ಸಲ್ಲಿಸಿದ್ದರು. ಆದರೀಗ ಈ ಅರ್ಜಿಯನ್ನು ಕೋರ್ಟ್ ವಜಾಗೊಳಿಸುವ ಮೂಲಕ ಮುರುಘಾ ಶ್ರೀಗೆ ಮತ್ತೆ ಜೈಲೇ ಗತಿಯಾಗಿದೆ. ಅದಾಗ್ಯೂ, ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಇನ್ನು, ಮುರುಘಾಶ್ರೀ ವಿರುದ್ಧ ಷಡ್ಯಂತರ ಆರೋಪ ಸಂಬಂಧ ಪೊಲೀಸರು ಸಮರ್ಪಕ ತನಿಖೆ ನಡೆಸದೇ ಅಸಹಾಯಕರಾಗಿದ್ದಾರೆ. ಹೀಗಾಗಿ ಚಿತ್ರದುರ್ಗ ಗ್ರಾಮಾಂತರ ಠಾಣೆಯಿಂದ ತನಿಖೆ ವರ್ಗಾಯಿಸಲು ಕೋರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನಿನ್ನೆ (ಜ.30) ಹೈಕೋರ್ಟ್ ವಿಚಾರಣೆ ನಡೆಸಿತ್ತು. ಈ ವೇಳೆ ರಾಜ್ಯಸರ್ಕಾರದ ಪ್ರತಿಕ್ರಿಯೆ ಕೇಳಿ ಫೆಬ್ರವರಿ 6ಕ್ಕೆ ವಿಚಾರಣೆಯನ್ನು ಮುಂದೂಡಿದೆ. ತನಿಖೆಯನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯಿಂದ ವರ್ಗಾಯಿಸಿ ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಯಿಂದ ತನಿಖೆ ನಡೆಸುವಂತೆ ಬಸವಪ್ರಭು ಸ್ವಾಮೀಜಿ ಪತ್ರ ಬರೆದಿದ್ದಾರೆ.
[t4b-ticker]

You May Also Like

More From Author

+ There are no comments

Add yours