ಬೆಂಗಳೂರು/ನಾರಾವಿ: ಬೆಳ್ತಂಗಡಿ ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ ೧ರಿಂದ ೯ರವರೆಗೆ ಅದ್ದೂರಿಯಾಗಿ ನಡೆಯಲಿದ್ದು, ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ವಿನಯ್ ಹೆಗ್ಡೆ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಜಗದೀಶ ಹೆಗಡೆ, ಲಕ್ಷ್ಮಣ್ ಬಂಗೇರ, ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷರಾದ ನಾರಾಯಣ ಪೂಜಾರಿ ಈದು, ಬಳಂಜ ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ಬಿ. ಅಮೀನ್ ಉಪಸ್ಥಿತರಿದ್ದರು.






