ನಾರಾವಿ: ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳು ಒಟ್ಟು ಸೇರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಅವರ ಜನ್ಮ ದಿನಾಚರಣೆಯ ಅಂಗವಾಗಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಚಿಣ್ಣರ ಕಲರವ- ಕ್ರೀಡಾಸಂಗಮ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಬಹು ವಿಜೃಂಭಣೆಯಿಂದ ಆಚರಿಸಲಾಯಿತು.
ಬೆಳಿಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜೆರೋಮ್ ಡಿಸೋಜಾ ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು. ಅಂತರರಾಷ್ಟ್ರೀಯ ತ್ರೋಬಾಲ್ ಆಟಗಾರ್ತಿ, ವಿಲೋನ ಡಿಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿದರು.





