ರಾಷ್ಟ್ರೀಯ ಯುವ ಸ್ವಯಂಸೇವಕರ ಹುದ್ದೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್10:
ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಚಿತ್ರದುರ್ಗ ನೆಹರು ಯುವ ಕೇಂದ್ರದ ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ಯುವ ಸ್ವಯಂಸೇವಕರ ಹುದ್ದೆಗೆ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ತಾಲೂಕಿಗೆ ಇಬ್ಬರಂತೆ ಹಾಗೂ ಕಚೇರಿಯಲ್ಲಿ ಕಂಪ್ಯೂಟರ್ ಅಪರೇಟರ್ ಆಗಿ ಇಬ್ಬರು ಸೇರಿ ಒಟ್ಟು 14 ಯುವ ಸ್ವಯಂಸೇವಕರು ಕೆಲಸ ಮಾಡಲು ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾರ್ಚ್ 24 ರವರೆಗೆ ವಿಸ್ತರಿಸಲಾಗಿದೆ.
ಗ್ರಾಮೀಣ ಭಾಗದಲ್ಲಿ ಯುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ಯುವಕ-ಯುವತಿಯರ ಸಂಘಗಳನ್ನು ರಚಿಸುವುದು, ಆರೋಗ್ಯ, ಸಾಕ್ಷರತೆ, ನೈರ್ಮಲ್ಯ ಹಾಗೂ ಸಾಮಾಜಿಕ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಅನುμÁ್ಠನಗೊಳಿಸುವುದು ಸ್ವಯಂ ಸೇವಕರ ಕೆಲಸವಾಗಿದೆ ಹಾಗೂ ಯುವ ನಾಯಕರಾಗಿ ಹೊರಹೊಮ್ಮಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬಯಸುವ ಯುವ ಜನರಿಗೆ ಉತ್ತಮ ಅವಕಾಶವಾಗಿದೆ.
ಅರ್ಜಿ ಸಲ್ಲಿಸುವವರು 18 ರಿಂದ 29 ವರ್ಷ ವಯೋಮಿತಿ ಒಳಗೆ ಇರಬೇಕು ಹಾಗೂ ಚಿತ್ರದುರ್ಗ ಜಿಲ್ಲೆಯ ನಿವಾಸಿಗಳಾಗಿರಬೇಕು. ಕನಿಷ್ಠ ಎಸ್‍ಎಸ್‍ಎಲ್‍ಸಿ ಪಾಸಾಗಿರಬೇಕು ಹಾಗೂ ಯಾವುದೇ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಾಗಿರಬಾರದು ಹಾಗೂ ಯಾವುದೇ ಸಂಘ ಸಂಸ್ಥೆ ಅಥವಾ ಇಲಾಖೆಯಲ್ಲಿ ಪೂರ್ಣ ಅಥವಾ ಅರೆಕಾಲಿಕ ಹುದ್ದೆಯನ್ನು ಹೊಂದಿರಬಾರದು. ಆಯ್ಕೆಗೊಂಡ ಸ್ವಯಂ ಸೇವಕರಿಗೆ ಮಾಸಿಕ ರೂ. 5,000/- ಗೌರವಧನ ನೀಡಲಾಗುವುದು.
ಅಭ್ಯರ್ಥಿಗಳು www.nyks.nic.in ವೆಬ್ ಸೈಟ್‍ನಲ್ಲಿ ಭೇಟಿ ನೀಡಿ ಪ್ರಸ್ತುತ ಯೋಜನೆಯ ಬಗ್ಗೆ ಸವಿಸ್ತಾರ ಮಾಹಿತಿ ಪಡೆದು ಅನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ ಅಥವಾ ಜಿಲ್ಲಾ ಯುವಜನ ಅಧಿಕಾರಿಗಳ ಕಚೇರಿ, ನೆಹರು ಯುವ ಕೇಂದ್ರ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಕಟ್ಟಡ, ಆಕಾಶವಾಣಿ ರಸ್ತೆ, ಚಿತ್ರದುರ್ಗ ಇಲ್ಲಿಗೆ ಬಂದು ನೇರವಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-222008, 9945038684 ಗೆ ಸಂಪರ್ಕಿಸಬೇಕು ಎಂದು ನೆಹರು ಯುವ ಕೇಂದ್ರ  ಜಿಲ್ಲಾ ಯುವಜನ ಅಧಿಕಾರಿ ಎನ್. ಸುಹಾಸ್ ತಿಳಿಸಿದ್ದಾರೆ

[t4b-ticker]

You May Also Like

More From Author

+ There are no comments

Add yours