ಬೆಳ್ತಂಗಡಿ: ನಾವೂರು ಗ್ರಾಮದ ಪರಾರಿ ನಿವಾಸಿ ಕಾಂತಪ್ಪ ಮೂಲ್ಯರವರ ಪತ್ನಿ ಶ್ರೀಮತಿ ಹರಿಣಾಕ್ಷಿರವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಮನೆಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಪಾರೆಂಕಿ, ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷರಾದ ಹರೀಶ್ ಮೋರ್ತಾಜೆ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ಗೌಡ, ಮಂಡಲ ಕಾರ್ಯದರ್ಶಿ ಪ್ರಭಾಕರ್ ಸವಣಾಲು, ಗ್ರಾಮ ಪಂಚಾಯತ್ ನಾವೂರು ಅಧ್ಯಕ್ಷರಾದ ಶ್ರೀಮತಿ ಸುನಂದ, ಉಪಾಧ್ಯಕ್ಷರಾದ ಶ್ರೀಮತಿ ಮಮತಾ, ಸದಸ್ಯರಾದ ಶ್ರೀಮತಿ ವೇದಾವತಿ, ಶಕ್ತಿಕೇಂದ್ರ ಅಧ್ಯಕ್ಷರಾದ ಪ್ರದೀಪ್ ಜೊತೆಗಿದ್ದರು.









