ನವದೆಹಲಿ, ಜೂ. 17: ಭಾರತದಲ್ಲಿ ಜೂನ್ 21ರಂದು ನಡೆಯಲಿರುವ ನೀಟ್ ಯುಜಿ ಮರು ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಮ್ ಆ್ಯಪ್ ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸಕರಕಾರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ದೆಹಲಿ ಹೈಕೋರ್ಟ್ನ ನ್ಯಾಯಮೂರ್ತಿ ತೇಜಸ್ ಕರಿಯಾ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ನ್ಯಾಯಾಲಯವು ಇಂದು ನಂತರದ ಅವಧಿಯಲ್ಲಿ ಪ್ರಕರಣದ ತುರ್ತು ವಿಚಾರಣೆ ನಡೆಸಲು ಒಪ್ಪಿಕೊಂಡಿದೆ.
ಜೂನ್ 21ರ ನೀಟ್ ಮರು ಪರೀಕ್ಷೆಯಲ್ಲಿ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಜೂನ್ 22ರವರೆಗೆ ಟೆಲಿಗ್ರಾಮ್ ಆಪ್ ಅನ್ನು ಬ್ಯಾನ್ ಮಾಡಿದೆ. ಈ ಬ್ಯಾನ್ ತೆರವುಗೊಳಿಸುವಂತೆ ಕೋರಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ಇಂದು ಈ ಬಗ್ಗೆ ವಿಚಾರಣೆ ನಡೆಸಲಿದೆ.



