ಪುತ್ತೂರಿನ ವಿದ್ಯಾರ್ಥಿಯಿಂದ ಅವಿಷ್ಕಾರ, ಶ್ಲಾಘಿಸಿ ನಗದು ಬಹುಮಾನ ನೀಡಿದ ಸಿಎಂ!
ಪುತ್ತೂರು, ನವೆಂಬರ್ 23: ಪುತ್ತೂರಿನ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಾಣಿಜ್ಯ ವಿದ್ಯಾರ್ಥಿ ಅರುಣ್ ಕುಮಾರ್, ಮುಖ ಗುರುತಿಸುವಿಕೆಯ ಮೂಲಕ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸುವ ಹೊಸ ತಂತ್ರಜ್ಞಾನವನ್ನು ಕಂಡುಹಿಡಿದಿದ್ದಕ್ಕಾಗಿ ಮುಖ್ಯಮಂತ್ರಿಗಳ ವಿಶೇಷ ಪ್ರಶಸ್ತಿಯನ್ನು ಪಡೆದಿದ್ದಾರೆ.
ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಅವರು ಅರುಣ್ ಅವರ ನಾವೀನ್ಯತೆಗೆ ಅಭಿನಂದನೆ ಸಲ್ಲಿಸಿದರು. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿಗಳು ಅರುಣ್ ಅವರಿಗೆ 15,000 ರೂ. ನಗದು ಬಹುಮಾನವನ್ನು ನೀಡಿದರು.









