ವೇಣೂರು: ಇತಿಹಾಸ ಪ್ರಸಿದ್ಧವಾದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು ಮಾರ್ಚ್ ತಿಂಗಳಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ಕಂಬಳ ಕ್ರೀಡಾಂಗಣದಲ್ಲಿ ನಡೆಯಿತು.
ಸಮಿತಿ ಅಧ್ಯಕ್ಷರಾದ ನಿತೀಶ್ ಎಚ್. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ೩೩ನೇ ವರ್ಷದ ಕಂಬಳವು ಯಶಸ್ವಿಯಾಗಿ ನಡೆಯಲು ಬೇಕಾದ ವ್ಯವಸ್ಥೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ರಕ್ಷಿತ್ ಶಿವರಾಮ್ ಅವರ ಗೌರವಾಧ್ಯಕ್ಷತೆಯಲ್ಲಿ ನಡೆಯಲಿರುವ ಕಂಬಳದ ಪೂರ್ವಭಾವಿ ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಶೇಖರ್ ಕುಕ್ಕೇಡಿ ಸೇರಿದಂತೆ ಸಮಿತಿಯ ಹಿರಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಕಂಬಳಾಭಿಮಾನಿಗಳು ಭಾಗವಹಿಸಿದ್ದರು.





